ಮದುವೆ ಮಾಡಿಸಿಲ್ಲ ಎಂದು ತಂದೆಯನ್ನೇ ಕೊಂದ ಪಾಪಿ ಮಗ!
ರಾಯಚೂರು: ಅನಾರೋಗ್ಯ ಇದೆ ಮದ್ದಿಗೆ ಹೋಗಬೇಕು. ಹಾಗೆಯೇ ಬರುವ ದಾರಿಯಲ್ಲಿ ಮಗನನ್ನು ಮಾತನಾಡಿಸಿಕೊಂಡು ಬರುತ್ತೇನೆ ಎಂದು ಹೊರಟ ತಂದೆ, ಪತ್ತೆಯಾಗಿದ್ದು ಶವವಾಗಿ. ಅದೂ ತನ್ನ ಪುತ್ರನಿಂದಲೇ ತಂದೆ ಭೀಕರವಾಗಿ ಹತ್ಯೆಗೀಡಾಗಿದ್ದಾರೆ.
ನಗರದ ಗೋಶಾಲಾ ರಸ್ತೆ ಬಳಿಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು, 75 ವರ್ಷ ವಯಸ್ಸಿನ ನಿವೃತ್ತ ಎಎಸ್ ಐ ಬಸವರಾಜಪ್ಪ ಎಂಬವರ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುತ್ರ ಜಗದೀಶ್ ಎಂಬಾತ ತನ್ನ ತಂದೆಯನ್ನೇ ಹತ್ಯೆ ಮಾಡಿದ ಪಾಪಿ ಪುತ್ರನಾಗಿದ್ದಾನೆ. ಆಸ್ತಿ, ಹಾಗೂ ಹಣಕಾಸಿನ ವಿಚಾರ ಮತ್ತು ತಂದೆ ತನಗೆ ಮದುವೆ ಮಾಡಿಸಿಲ್ಲ ಎನ್ನುವ ಕಾರಣಕ್ಕೆ ತಂದೆಯನ್ನೇ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಮಗ ಹಣಕಾಸು ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆಸುತ್ತಿರುತ್ತಾನೆ ಎಂದು ತಂದೆ, ತಾಯಿ ಆತನಿಂದ ದೂರವಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ರಾಯಚೂರು ನಗರದ ಮಗಳ ಮನೆಗೆ ಬಂದಿದ್ದ ಬಸವರಾಜಪ್ಪ , ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದು, ಬರುವ ದಾರಿಯನ್ನು ಮಗನನ್ನು ನೋಡಲು ಹೋಗಿದ್ದಾನೆ. ಆದರೆ ತಂದೆಯ ಪುತ್ರ ಪ್ರೇಮವನ್ನರಿಯದೇ ಪಾಪಿ ಪುತ್ರ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಜಗದೀಶನನ್ನು ಮಾರ್ಕೆಟ್ ಯಾರ್ಡ್ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಾರ್ಥೀವ ಶರೀರದಂತೆ ಮಲಗಿ ಟೋಲ್ ಗೇಟ್ ಅನ್ಯಾಯ ಪ್ರಶ್ನಿಸಿದ ಆಸಿಫ್ ಆಪತ್ಬಾಂಧವ
ಲಿಬಿಯಾ ಪ್ರಧಾನಿಯ ಬೆಂಗಾವಲು ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ
ಎಚ್‌ಐವಿ ಹೊಂದಿದ್ದ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ