ಮದುವೆಯಾಗಿ 15 ದಿನದಲ್ಲೇ ನವವಿವಾಹಿತೆ ಸಾವು!

rashmi
05/09/2022

ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24), ಆತ್ಮಹತ್ಯೆ ಮಾಡಿಕೊಂಡ ಯುವತಿ.

ಗಂಜಿಮಠ ಮೂಲದ ಹಾಗೂ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಜೊತೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಆಗಸ್ಟ್ 21ರಂದು ವಿವಾಹ ನಡೆದಿತ್ತು. ರಶ್ಮಿಯ ಅಕ್ಕನ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಅದೇ ದಿನ ರಶ್ಮಿ ವಿಷ ಸೇವಿಸಿದ್ದಾರೆ. ಬಳಿಕ ಆಕೆಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ನವವಿವಾಹಿತೆ

ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version