ಮದುವೆಗೆ ತೆರಳುತ್ತಿದ್ದವರ ದುರಂತ ಸಾವು: ಭೀಕರ ಅಪಘಾತಕ್ಕೆ 7 ಬಲಿ
ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವಾಹನ ರಸ್ತೆ ಬದಿಯ ಬಾವಿಗೆ ಉರುಳಿದ್ದು, ಅಪ್ರಾಪ್ತ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ.
ಮೊಡಮಾವ್ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತು ಐವರು ಗಾಯಗೊಂಡಿರುವುದಾಗಿ ವರದಿಯಾಗಿದೆ
ಮೊಹ್ಖೇದ್ ನ ಕೊಡಮಾವ್ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ವಾಹನದಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಪ್ರಯಾಣಿಕರಿದ್ದರು.
ಎದುರಿನಿಂದ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಬಾವಿಗೆ ಬಿದ್ದಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
500 ರೂಪಾಯಿ ತೆಗೆದರೆ 2,500 ರೂ. ಕೊಡ್ತಿದ್ದ ಎಟಿಎಂ: ಎಟಿಎಂ ಕೇಂದ್ರದ ಮುಂದೆ ಜನವೋ ಜನ!
ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಕಾಂಗ್ರೆಸ್ ನಾಯಕಿ
ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದ ಒಂಟಿ ಮಹಿಳೆಯನ್ನು ಇರಿದು ಬರ್ಬರ ಹತ್ಯೆ!
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ!
ಕರ್ತವ್ಯ ನಿರತ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!