ಮದ್ಯ ಜೀವನ ಕೆಡಿಸಿತು: ನವ ವಿವಾಹಿತ ಆತ್ಮಹತ್ಯೆಗೆ ಶರಣು

24/08/2022
ವಿಪರೀತ ಮದ್ಯಪಾನ ಮಾಡುತ್ತಿದ್ದ ನವವಿವಾಹಿತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಿಲಾರು ಗ್ರಾಮದ ಕುಡ್ತಕುಮೇರಿ ಎಂಬಲ್ಲಿ ಆ.23ರಂದು ನಡೆದಿದೆ.
ಪಡುಬೆಳ್ಳೆ ಪಾಂಬೂರು ನಿವಾಸಿ 27ವರ್ಷ ಪಾಂಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ. ಇವರು ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು, ಜೀವನದಲ್ಲಿ ಮನನೊಂದು ನಿನ್ನೆ ಶೆಡ್ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka