ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏನೋ ಕಚ್ಚಿದಂತಾಯ್ತು! : ಮಧ್ಯ ರಾತ್ರಿ ವೇಳೆ ಆತನ ಪ್ರಾಣವೇ ಹೊರಟು ಹೋಗಿತ್ತು!

tirupati
06/08/2022

ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ನಡೆದಿದೆ.

ತಿರುಪತಿ(35) ಎಂಬವರು ಮೃತಪಟ್ಟವರಾಗಿದ್ದು, ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎಡ ಕೈಗೆ ಏನೋ ಕಚ್ಚಿದಂತಾಗಿದ್ದು, ತಕ್ಷಣವೇ ಅವರು ಮನೆಗೆ ಬಂದು, ಕೈಗೆ ಏನೋ ಕಚ್ಚಿದೆ ಎಂದು ಹೇಳಿದ್ದಾರೆ.  ಸ್ಥಳಕ್ಕೆ ಹೋಗಿ ನೋಡಿದಾಗ ಹಾವೊಂದು ಪತ್ತೆಯಾಗಿತ್ತು.

ತಕ್ಷಣವೇ ಅವರನ್ನು ಇಲ್ಲಿನ ಶಾರದಳ್ಳಿಗೆ ಕರೆದೊಯ್ದು ಖಾಸಗಿ ಔಷಧ ತೆಗೆಸಿ, ಶಹಾಪೂರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಯ ಯುನೈಟೆಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಷ್ಟರಲ್ಲಾಗಲೇ ತಿರುಪತಿ ಕೊನೆಯುಸಿರೆಳೆದಿದ್ದರು.

ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version