ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ
ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ, ಅತ್ಯಾಚಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ಕಳೆದ ವರ್ಷ ಉಡುಪಿಯಲ್ಲಿ 41 ವರ್ಷದ ವ್ಯಕ್ತಿ ತನ್ನ ತನ್ನ 14 ವರ್ಷದ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂಬುದಕ್ಕೆ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಈ ಆದೇಶ ನೀಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮೊದಲ ಬಾರಿಗೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ನೆರೆಹೊರೆ ಮನೆಯವರ ಸಹಾಯದಿಂದ ಬಾಲಕಿ ತನ್ನ ತಾಯಿಯ ಗಮನಕ್ಕೆ ತಂದು ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಅನ್ವಯ ಆಕೆಯ ತಂದೆಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯ್ದೆ ದಾಖಲಿಸಿದ್ದರು.
ಉಡುಪಿ ಮಹಿಳಾ ಪೊಲೀಸ್ ಠಾಣೆಯ ಅಂದಿನ ಸಿಪಿಐ ಸಿ.ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, 11 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ
ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಕಿಡಂಬಿ ಶ್ರೀಕಾಂತ್ ಗೆ ಬೆಳ್ಳಿ ಪದಕ
ಬೈಕ್ ಗೆ ಲಾರಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ತಾಯಿ ದಾರುಣ ಸಾವು
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವು
ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?