ಮಗು ಸಾವನ್ನಪ್ಪಿದ ಚಿಂತೆ: ತಂದೆ ಸಾವಿಗೆ ಶರಣು

ಮಗು ಸಾವನ್ನಪ್ಪಿದ ಚಿಂತೆಯಲ್ಲಿದ್ದ ವ್ಯಕ್ತಿಯೋರ್ವರು ಮನೆಯ ಮಾಡಿನ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೆಸ್ಕತ್ತೂರು ಗ್ರಾಮದಲ್ಲಿ ಜ.15ರಂದು ಮಧ್ಯಾಹ್ನ 3.30ಕ್ಕೆ ನಡೆದಿದೆ.
ಮೃತರನ್ನು ಹೆಸ್ಕತ್ತೂರು ಗ್ರಾಮದ ನಿವಾಸಿ 33ವರ್ಷದ ರವೀಂದ್ರ ಕುಲಾಲ್ ಎಂದು ಗುರುತಿಸಲಾಗಿದೆ. ಇವರ ಒಂದೂವರೆ ವರ್ಷದ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು.
ಅದಾದ ಬಳಿಕ ರವೀಂದ್ರ ಅವರು ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು, ಇದೇ ಚಿಂತೆಯಲ್ಲಿ ನಿನ್ನೆ ಮಧ್ಯಾಹ್ನ ಮನೆಯಲ್ಲಿ ಗಲಾಟೆ ಮಾಡಿ ಮನೆಯವರೆಲ್ಲರನ್ನು ಮನೆಯಿಂದ ಹೊರಗಡೆ ಕಳುಹಿಸಿದ್ದರು. ಬಳಿಕ ಮನೆಯ ಮಾಡಿನ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw