ಮಗುಚಿ ಬಿದ್ದ ಆಟೋ ರಿಕ್ಷಾ: ವೃದ್ಧ ಸ್ಥಳದಲ್ಲಿಯೇ ಸಾವು, ಇಬ್ಬರ ಸ್ಥಿತಿ ಗಂಭೀರ - Mahanayaka
4:03 AM Wednesday 11 - December 2024

ಮಗುಚಿ ಬಿದ್ದ ಆಟೋ ರಿಕ್ಷಾ: ವೃದ್ಧ ಸ್ಥಳದಲ್ಲಿಯೇ ಸಾವು, ಇಬ್ಬರ ಸ್ಥಿತಿ ಗಂಭೀರ

auto accident
28/07/2021

ಬಂಟ್ವಾಳ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ಏಳು ಮಂದಿ ಗಾಯಗೊಂಡು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ನಡೆದಿದೆ.

85 ವರ್ಷ ವಯಸ್ಸಿನ ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಇನ್ನೂ 7 ಮಂದಿ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ  ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳನ್ನು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬುಧವಾರ ಬೆಳಗ್ಗೆ ಆಟೋ ರಿಕ್ಷಾವು ಸರಪಾಡಿಯಿಂದ ಬಂಟ್ವಾಳದ ಕಡೆಗೆ ಹಲವು ಪ್ರಯಾಣಿಕರನ್ನು ಹೊತ್ತುಕೊಂಡು ಬರುತ್ತಿದ್ದು, ಪೆರಿಯಪಾದೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

 

ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!

ಅಶ್ಲೀಲ ಚಿತ್ರ ನಿರ್ಮಾಣ: ಮಧ್ಯಂತರ ಜಾಮೀನು ಕೋರಿದ ಬಾಲಿವುಡ್ ನ ಮತ್ತೋರ್ವಳು ನಟಿ

ಯುವಕನ ಲಾಕಪ್ ಡೆತ್ ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ ಗ್ರಾಮಸ್ಥರು | ಮಹಿಳಾ ಪೇದೆ ಸ್ಥಳದಲ್ಲಿಯೇ ಸಾವು

ಬೆಳಗ್ಗೆ ಅಕ್ಕನ ಯೋಗದ ಭಂಗಿ, ಭಾವನಿಂದ ರಾತ್ರಿಯ ಭಂಗಿ | ಶಿಲ್ಪಾ ಶೆಟ್ಟಿಯ ತಂಗಿ ವಿರುದ್ಧ ಟ್ರೋಲ್

ರಾಜ್ಯ ಬಿಟ್ಟು ಎಲ್ಲಿಯೂ ಹೋಗಲ್ಲ ಎಂದ ಯಡಿಯೂರಪ್ಪ | ಸಿಎಂ ಸ್ಥಾನಕ್ಕೆ ರಾಜೀನಾಮೆಯ ಬಳಿಕ ಮುಂದಿನ ಆಯ್ಕೆ ಏನು?

ಇತ್ತೀಚಿನ ಸುದ್ದಿ