ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಅರೆಸ್ಟ್ - Mahanayaka
6:06 PM Wednesday 11 - December 2024

ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಅರೆಸ್ಟ್

arrest
20/11/2021

ಉಪ್ಪಿನಂಗಡಿ: ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭೀಣಿಯಾಗಲು ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಕೆಯ ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತಿದೆ ಎಂದು ಭಾವಿಸಿದ ಹೆತ್ತವರು, ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಬಾಲಕಿ ಗರ್ಭಿಣಿ ಎನ್ನುವುದು ತಿಳಿದು ಬಂದಿದೆ.

ಇನ್ನೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಕ್ಷಣವೇ ಪ್ರಕರಣದ ಗಂಭೀರತೆ ತಿಳಿದು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ಘಟನೆಯನ್ನು ತಂದಿದ್ದಾರೆ. ಬಾಲಕಿಯನ್ನು ವಿಚಾರಿಸಿದಾಗ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರ್ ಮನೆ ನಿವಾಸಿ 34 ವರ್ಷ ವಯಸ್ಸಿನ ಕೇಶವ ಎಂಬಾತ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ಹೇಳಿಕೆಯನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ, 5 ಲಕ್ಷ ಪರಿಹಾರ ನೀಡುತ್ತೇವೆ | ಸಚಿವ ಡಾ.ಕೆ.ಸುಧಾಕರ್

ಅಪಾಯದ ಮಟ್ಟ ಮೀರಿ ಉಕ್ಕಿ ಹರಿದ ಪಂಬಾ ನದಿ: ಶಬರಿಮಲೆ ಯಾತ್ರೆ ನಿಷೇಧ

“ಕೃಷಿ ಕಾಯ್ದೆ ರದ್ದು ಮಾಡುವ ಪರಿಸ್ಥಿತಿ ಬಂದೇ ಬರುತ್ತದೆ” | ನಿಜವಾಯ್ತು ರಾಹುಲ್ ಗಾಂಧಿ ಹೇಳಿಕೆ

ಶ್ರೀಕೃಷ್ಣ ಪರಮಾತ್ಮನ ಕೈ ತುಂಡಾಯಿತು ಎಂದು ವಿಗ್ರಹವನ್ನು ಆಸ್ಪತ್ರೆಗೆ ದಾಖಲಿಸಿದ ಅರ್ಚಕ

ಪ್ರವಾಹಕ್ಕೆ ನಲುಗಿದ ಆಂಧ್ರಪ್ರದೇಶ: 17 ಮಂದಿ ಸಾವು, 100ಕ್ಕೂ ಅಧಿಕ ಮಂದಿ ನಾಪತ್ತೆ

ಆಟೋ—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ಐವರ ದಾರುಣ ಸಾವು

ಇತ್ತೀಚಿನ ಸುದ್ದಿ