ಗ್ರಾ.ಪಂ. ಅಧ್ಯಕ್ಷೆಯಾಗಿ ಅಧಿಕಾರ ವಹಿಸಿದ ಕೆಲವೇ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ - Mahanayaka

ಗ್ರಾ.ಪಂ. ಅಧ್ಯಕ್ಷೆಯಾಗಿ ಅಧಿಕಾರ ವಹಿಸಿದ ಕೆಲವೇ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

13/02/2021

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಂಬ್ಲಮೊಗರಿನಲ್ಲೊಂದು ಅಪರೂಪದ ಘಟನೆ ನಡೆದಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅಧ್ಯಕ್ಷೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲತಾ ಪರಮೇಶ್ವರ್ ಹಾಗೂ ಉಪಾಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್ ಅವರು ಶುಕ್ರವಾರ ಮಧ್ಯಾಹ್ನದ ವೇಳೆ ಅಧಿಕಾರ ವಹಿಸಿಕೊಂಡಿದ್ದರು.

ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಲತಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಲತಾ ಅವರಿಗೆ ವೈದ್ಯರು ಫೆ.20ಕ್ಕೆ ಹೆರಿಗೆ ಎಂದು ದಿನಾಂಕ ನೀಡಿದ್ದರು. ಆದರೆ ಅದಕ್ಕೂ ಮೊದಲೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.


Provided by

ಇತ್ತೀಚಿನ ಸುದ್ದಿ