ಮಹಾಭಾರತ ಧಾರಾವಾಹಿಯ 'ಭೀಮ' ಪ್ರವೀಣ್​ ಕುಮಾರ್ ಸೋಬ್ತಿ ನಿಧನ - Mahanayaka
3:30 AM Wednesday 11 - December 2024

ಮಹಾಭಾರತ ಧಾರಾವಾಹಿಯ ‘ಭೀಮ’ ಪ್ರವೀಣ್​ ಕುಮಾರ್ ಸೋಬ್ತಿ ನಿಧನ

mahabaratha
08/02/2022

ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ಭೀಮ್ ಪಾತ್ರದಲ್ಲಿ ನಟಿಸಿದ್ದ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದ ನಟ ಮತ್ತು ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ (74) ಮೃತಪಟ್ಟಿದ್ದಾರೆ. ಅವರಿಗೆ ದೀರ್ಘಕಾಲದ ಎದೆ ಸೋಂಕಿನ ಸಮಸ್ಯೆಯಿದ್ದು, ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ಪ್ರವೀಣ್ ಅವರ ಸಂಬಂಧಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರವೀಣ್ ಕುಮಾರ್ ಸೋಬ್ತಿ ಹ್ಯಾಮರ್ ಮತ್ತು ಡಿಸ್ಕಸ್ ಥ್ರೋನಲ್ಲಿ ವಿವಿಧ ಅಥ್ಲೆಟಿಕ್ ಈವೆಂಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. 1966 ಮತ್ತು 1970ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಪದಕಗಳನ್ನು ಅವರು ಗೆದ್ದಿದ್ದರು. ಅವರು 1966ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಅವರು ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಭಾರತಕ್ಕೆ ತಂದು ಕೊಟ್ಟಿದ್ದರು.

ಅಥ್ಲೀಟ್ ನಂತರ ನಟನಾ ವೃತ್ತಿಯನ್ನು ಪ್ರಾರಂಭಿಸಿದ ಅವರು ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದ್ದರು. ಮೃತರು ಪತ್ನಿ, ಮಗಳು, ಇಬ್ಬರು ಕಿರಿಯ ಸಹೋದರರು ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಕಾಡಾನೆ

ರಾಹುಲ್ ಗಾಂಧಿ ಲೂಧಿಯಾನ ರ‍್ಯಾಲಿಯಲ್ಲಿ ಭದ್ರತಾ ಲೋಪ!

ಮೃತ ಗುಬ್ಬಚ್ಚಿಗೆ ತಿಥಿ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು

ಕೇವಲ 900 ರೂ. ಆಸೆಗೆ ತಂದೆಯನ್ನೇ ಕೊಲೆ ಮಾಡಿದ ಪುತ್ರ

ಭಾರಿ ಹಿಮಪಾತ: 7 ಸೇನಾ ಸಿಬ್ಬಂದಿ ಹಿಮದಡಿ ಸಿಲುಕಿರುವ ಶಂಕೆ

 

ಇತ್ತೀಚಿನ ಸುದ್ದಿ