ಮಹಾಕುಂಭ ಮೇಳ 2025: ಭಂಡಾರದ ಆಹಾರದಲ್ಲಿ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ ಅಮಾನತು - Mahanayaka

ಮಹಾಕುಂಭ ಮೇಳ 2025: ಭಂಡಾರದ ಆಹಾರದಲ್ಲಿ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ ಅಮಾನತು

31/01/2025

ಉತ್ತರ ಪ್ರದೇಶದ ಪ್ರಯಾಗ್ರಾಜ್ ನ ಮಹಾ ಕುಂಭಮೇಳದಲ್ಲಿ ಭಕ್ತರಿಗಾಗಿ ಭಂಡಾರದಲ್ಲಿ ನೀಡಲಾಗುವ ಆಹಾರದಲ್ಲಿ ಬೂದಿಯನ್ನು ಬೆರೆಸಿದ ವಿಡಿಯೋ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಯನ್ನು ಗುರುವಾರ ಅಮಾನತುಗೊಳಿಸಲಾಗಿದೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿದ ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸೊರಾನ್ ನ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ವೀಡಿಯೋದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಒಲೆಯ ಮೇಲೆ ತಯಾರಿಸಲಾಗುವ ಆಹಾರಕ್ಕೆ ಬೂದಿಯನ್ನು ಸೇರಿಸುವುದನ್ನು ಕಾಣಬಹುದು.

ಬಳಕೆದಾರರೊಬ್ಬರು ಡಿಸಿಪಿ ಗಂಗಾ ನಗರ್ ಅವರ ಖಾತೆಯನ್ನು ಟ್ಯಾಗ್ ಮಾಡಿ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ