ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು - Mahanayaka
1:30 AM Thursday 12 - December 2024

ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು

student
06/08/2022

ಪುತ್ತೂರು: ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪ್ರೌಢಶಾಲೆ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ, ಮೃತ ಬಾಲಕ. ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದೆ ಈತ ಮನೆಯ ದಾರಿಯಲ್ಲಿರುವ ವಸತಿ ಸಮುಚ್ಚಯಕ್ಕೆ ತೆರಳಿದ್ದು, ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ.

ಘಟನೆ ನಡೆದ ತಕ್ಷಣ ಸ್ಥಳೀಯರು ಸೇರಿ ಗಾಯಾಳು ಬಾಲಕನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ರಾತ್ರಿ ವೇಳೆಗೆ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ