ಮಹಾನಗರ ಪಾಲಿಕೆ ಸದಸ್ಯೆಯಾಗಿ  22 ವರ್ಷದ ತ್ರಿವೇಣಿ ಆಯ್ಕೆ - Mahanayaka
1:16 PM Wednesday 5 - February 2025

ಮಹಾನಗರ ಪಾಲಿಕೆ ಸದಸ್ಯೆಯಾಗಿ  22 ವರ್ಷದ ತ್ರಿವೇಣಿ ಆಯ್ಕೆ

thriveni
30/04/2021

ಬಳ್ಳಾರಿ: ಮಹಾನಗರ ಪಾಲಿಕೆ ಸದಸ್ಯೆಯಾಗಿ  22 ವರ್ಷ ವಯಸ್ಸಿನ ಯುವತಿ ಚುನಾಯಿತರಾಗಿದ್ದು, ಪಾಲಿಕೆ ಪ್ರವೇಶಿಸುವ ಮೂಲಕ ಅತೀ ಕಿರಿಯ ವಯಸ್ಸಿನ ಸದಸ್ಯೆ ಎಂದು ಗಮನ ಸೆಳೆದಿದ್ದಾರೆ.

ಇಲ್ಲಿನ ನಾಲ್ಕನೇ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ  ತ್ರಿವೇಣಿ ಗೆಲುವಿನ ನಗೆ ಬೀರಿದ್ದಾರೆ. ಇನ್ನೂ ತಮ್ಮ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಿದ ಅವರು, ಮತದಾರರು ನನ್ನನ್ನು ಗೆಲ್ಲಿಸಿರುವುದರಿಂದ ಅಭೂತಪೂರ್ವ ಕೆಲಸಗಳನ್ನು ಮಾಡಿ ಅವರ ನಿರೀಕ್ಷೆಗಳನ್ನು ಉಳಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಹೆಲ್ತ್ ಇನ್ಸ್ ಪೆಕ್ಟರ್ ಕೋರ್ಸ್ ನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ತ್ರಿವೇಣಿ, ನಗರ ಸಭೆ ಸ್ಪರ್ಧೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಇದೀಗ ಗೆಲುವಿನ ನಗೆ ಬೀರಿರುವ ಅವರುತಮ್ಮ ವಾರ್ಡ್ ನ ಸಮಸ್ಯೆಗಳನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ