ಮಹಾನಾಯಕ ಪೇಜ್ ಹ್ಯಾಕ್ ಮಾಡಿ, ದುರ್ಬಳಕೆ: ಕಿಡಿಗೇಡಿಗಳ ವಿರುದ್ಧ ದೂರು ದಾಖಲು
13/12/2024
ಮಂಗಳೂರು: ಮಹಾನಾಯಕ ಸುದ್ದಿವಾಹಿನಿಯ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ.
ಇತ್ತೀಚೆಗೆ “ಮಹಾನಾಯಕ–Mahanayaka” ಎಂಬ ಹೆಸರಿನ ಸುದ್ದಿ ಸಂಸ್ಥೆಯ ಫೇಸ್ ಬುಕ್ ಖಾತೆಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿಕೊಂಡಿದ್ದು, ಬಳಿಕ ಪೇಜ್ ನ್ನು ತಮ್ಮ ಸುಪರ್ಧಿಗೆ ಪಡೆದುಕೊಂಡು, ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸುದ್ದಿ ಸಂಸ್ಥೆಯ ಘನತೆಗೆ ಕುಂದುಂಟು ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಕಿಡಿಗೇಡಿಗಳ ವಿರುದ್ಧ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: