ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಎನ್‌ಸಿಪಿ ಪಕ್ಷಕ್ಕೆ ಸೇರ್ಪಡೆಯಾದ ಬಾಬಾ ಸಿದ್ದೀಕಿ ಪುತ್ರ
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಮಹಾರಾಷ್ಟ್ರದ ಮಾಜಿ ಸಚಿವ ಇತ್ತೀಚಿಗೆ ಹತ್ಯೆಗೀಡಾದಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ್ದಾರೆ. ಮುಂಬರುವ ಚುನಾವಣೆಗೆ ಬಾಂದ್ರಾ ಪೂರ್ವ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಜೀಶಾನ್ ಸಿದ್ದೀಕಿ ಅವರನ್ನು ಎನ್ ಸಿಪಿ ಘೋಷಿಸಿದೆ.
ಎನ್ ಸಿಪಿಗೆ ಸೇರಿದ ನಂತರ ಮಾತನಾಡಿದ ಜೀಶಾನ್, “ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನ. ಈ ಕಠಿಣ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನಿಲ್ ತತ್ಕರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ಬಾಂದ್ರಾ ಪೂರ್ವದಿಂದ ನಾಮನಿರ್ದೇಶನವನ್ನು ಪಡೆದಿದ್ದೇನೆ. ಎಲ್ಲಾ ಜನರ ಪ್ರೀತಿ ಮತ್ತು ಬೆಂಬಲದೊಂದಿಗೆ ನಾನು ಖಂಡಿತವಾಗಿಯೂ ಬಾಂದ್ರಾ ಈಸ್ಟ್ ಅನ್ನು ಮತ್ತೆ ಗೆಲ್ಲುತ್ತೇನೆ ಎಂದು ನನಗೆ ಖಾತ್ರಿಯಿದೆ” ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth