ಶಿವಾಜಿ ಪ್ರತಿಮೆ ಕುಸಿತದ ಬೆನ್ನಲ್ಲೇ ಮಹಾಯುತಿ ಮೈತ್ರಿಯಲ್ಲಿ ಬಿರುಕು..!? - Mahanayaka
7:22 PM Wednesday 18 - September 2024

ಶಿವಾಜಿ ಪ್ರತಿಮೆ ಕುಸಿತದ ಬೆನ್ನಲ್ಲೇ ಮಹಾಯುತಿ ಮೈತ್ರಿಯಲ್ಲಿ ಬಿರುಕು..!?

maharashtra
31/08/2024

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಯಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ ಎಂಬ‌ ಮಾಹಿತಿ ಹರಿದಾಡ್ತಿದೆ. ಇವೆಲ್ಲವೂ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಮಹಿಳೆಯರಿಗಾಗಿ ಘೋಷಿಸಿದ ‘ಲಡ್ಕಿ ಬಹಿನ್ ಯೋಜನೆ’ ಎಂಬ ಯೋಜನೆಯ ಜಾರಿಯೊಂದಿಫ಼ೆ ಪ್ರಾರಂಭವಾಯಿತು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಕ್ಷಾಬಂಧನದ ಮೊದಲು ಫಲಾನುಭವಿಗಳಿಗೆ ಹಣವನ್ನು ವರ್ಗಾಯಿಸುವ ಮೂಲಕ ಯೋಜನೆಯನ್ನು ಪ್ರಾರಂಭಿಸಿದರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಯೋಜನೆಯನ್ನು ಉತ್ತೇಜಿಸಲು ಯಾತ್ರೆಯನ್ನು ಪ್ರಾರಂಭಿಸಿದರು.

ಈ ಮಧ್ಯೆ ಪವಾರ್ ಅವರ ಪಕ್ಷವಾದ ಎನ್ ಸಿಪಿ ಈ ಯೋಜನೆಯ ಹಿಂದೆ ಮುಖ್ಯಮಂತ್ರಿ ಹೆಸರನ್ನು ಉಲ್ಲೇಖಿಸಲಿಲ್ಲ. ಇದು ರಾಜಕೀಯ ಬಿರುಗಾಳಿಗೆ ಕಾರಣವಾಯಿತು.

ಏಕ್‌ನಾಥ್ ಶಿಂಧೆ ಅವರ ಶಿವಸೇನೆ ಬಣದ ಹಿರಿಯ ನಾಯಕ ರಾಮದಾಸ್ ಕದಮ್, ಮುಂಬೈ-ಗೋವಾ ಹೆದ್ದಾರಿ ಯೋಜನೆಯ ಬಾಕಿ ಇರುವ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವ ಮತ್ತು ಬಿಜೆಪಿ ನಾಯಕ ರವೀಂದ್ರ ಚವಾಣ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಕೆರಳಿಸಿತು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಫಡ್ನವೀಸ್ ಅವರು ಶಿಂಧೆ ಅವರನ್ನು ಒತ್ತಾಯಿಸಿದ್ದಾರೆ.


Provided by

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಸಿಂಧುದುರ್ಗ್ ನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಯ ಕುಸಿತದ ಬೆನ್ನಲ್ಲೇ ಮಹಾಯುತಿ ಮೈತ್ರಿಕೂಟದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಯಾಕೆಂದರೆ ಶಿವಸೇನೆ, ಎನ್ಸಿಪಿ ಮತ್ತು ಬಿಜೆಪಿ ಈ ಘಟನೆಯ ಬಗ್ಗೆ ಬೇರೆ ಬೇರೆ ಹೇಳಿಕೆಗಳನ್ನು ನೀಡಿವೆ.

ಎನ್ಸಿಪಿ (ಅಜಿತ್ ಪವಾರ್ ಬಣ) ಎಂಎಲ್ಸಿ ಅಮೋಲ್ ಮಿತ್ಕಾರಿ, ಪ್ರತಿಮೆ ಶಿಲ್ಪಿ ಜಯದೀಪ್ ಆಪ್ಟೆ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ವಿರೂಪಗೊಳಿಸುವ ಮೂಲಕ ಉದ್ದೇಶಪೂರ್ವಕವಾಗಿ ಅವರ ಇತಿಹಾಸವನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ