ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ: ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ. ಒಬ್ಬ ವ್ಯಕ್ತಿಯಲ್ಲಿ ಪರಿವರ್ತನೆಯಾದರೆ ದೈವದತ್ತವಾದುದನ್ನು ಮುಟ್ಟಬಹುದು ಎಂದು ಅವರು ತೋರಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಬಳಿ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಬೆಳೆಯುತ್ತಿರುವ ಜನಸಂಖ್ಯೆ, ಅವರ ಆಶೋತ್ತರಗಳ ಬಗ್ಗೆ ಸಮಾಜ ಜಾಗೃತವಾಗಿದೆ. ಈ ಸಮುದಾಯ ಬೇಡಿಕೆಗಳ ಬಗ್ಗೆ ಗಂಭೀರ ಚಿಂತನೆ ಮಾಡಿ ಅವರಿಗೆ ನ್ಯಾಯ, ಅವಕಾಶ ಕೊಡುವ ಕೆಲಸವನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ರಜಾ ದಿನವೆಂದು ಘೋಷಿಸಿ, ಸರ್ಕಾರದ ವತಿಯಿಂದ ಜಯಂತಿಯನ್ನು ಆಚರಣೆ ಮಾಡಿಕೊಂಡು ಬಂದಿದೆ. ಅವರು ಜಗತ್ತು ಕಂಡ ಶ್ರೇಷ್ಠ ಮಹಾಕವಿ. ಜಗತ್ತಿನ 10 ಶ್ರೇಷ್ಠ ಸಾಹಿತ್ಯ ಕೃತಿಗಳಲ್ಲಿ ವಾಲ್ಮೀಕಿ ರಚಿಸಿದ ರಾಮಾಯಣ ಕೂಡಾ ಇಂದು. ಪ್ರತಿಯೊಬ್ಬರ ಬದುಕಿನಲ್ಲಿ ಅದು ಹಾಸುಹೊಕ್ಕಾಗಿದೆ. ಎಲ್ಲರಿಗೂ ಆದರ್ಶವಾಗಿದೆ. ನಾವೆಲ್ಲರೂ ಅದರಿಂದ ಜೀವನದ ಪಾಠ ಕಲಿಯುವಂತಾಗಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ನಿಮ್ಮ ಮೆಚ್ಚಿನ ಮಹಾನಾಯಕ ಮಾಧ್ಯಮಕ್ಕೆ 1 ವರ್ಷದ ಸಂಭ್ರಮ
ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ: ಸಿಎಂ ಬಸವರಾಜ್ ಬೊಮ್ಮಾಯಿ
45 ವರ್ಷದ ವ್ಯಕ್ತಿಯೊಂದಿಗೆ 25 ವರ್ಷದ ಯುವತಿಯ ಮದುವೆ: ಈ ಚಿತ್ರದ ಅಸಲಿ ಕಥೆ ಏನು?
ಸಿದ್ದರಾಮಯ್ಯ ‘ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್’ ಅನ್ನುತ್ತಿದ್ದಾರೆ | ನಳಿನ್ ಕುಮಾರ್ ಕಟೀಲ್ ವ್ಯಂಗ್ಯ
ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ | ಮಂಗಳೂರಿನ ಖ್ಯಾತ ವಕೀಲನ ವಿರುದ್ಧ ದೂರು
ಮಾಧ್ಯಮದವರು ಕರೆಕ್ಟ್ ಇದ್ದಿದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? | ರಮೇಶ್ ಜಾರಕಿಹೊಳಿ
ನೆಲ್ಯಾಡಿ: ಮನೆಯ ಕೋಣೆಯಲ್ಲಿಯೇ ನೇಣಿಗೆ ಶರಣಾದ ಮಹಿಳೆ