ಮಹಾತ್ಮ ಗಾಂಧಿಯವರ ಚಿಂತನೆ ಹಿಡಿದಿಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ - Mahanayaka
5:36 PM Friday 20 - September 2024

ಮಹಾತ್ಮ ಗಾಂಧಿಯವರ ಚಿಂತನೆ ಹಿಡಿದಿಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

rahul gandhi
27/12/2021

ನವದೆಹಲಿ: ಛತ್ತೀಸಗಡದ ರಾಯ್‌ಪುರದಲ್ಲಿ ನಡೆದ ‘ಧರ್ಮ ಸಂಸತ್’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದು, ಈ ಮೂಲಕ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನೀವು ನನ್ನನ್ನು ಕಟ್ಟಿಹಾಕಬಹುದು, ತೊಂದರೆ ನೀಡಬಹುದು, ನನ್ನ ದೇಹವನ್ನು ನಾಶ ಮಾಡಬಹುದು, ಆದರೆ ನನ್ನ ಚಿಂತನೆಗಳನ್ನು ನಾಶಮಾಡಲು ನಿಮ್ಮಿಂದ ಸಾಧ್ಯವಿಲ್ಲ ಎಂಬ ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ಭಾನುವಾರ ಸಂಜೆ ಛತ್ತೀಸಗಡದ ರಾಯ್‌ಪುರದಲ್ಲಿ ನಡೆದ ಎರಡು ದಿನಗಳ ‘ಧರ್ಮ ಸಂಸತ್’ ಕಾರ್ಯಕ್ರಮದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು ಧರ್ಮದ ರಕ್ಷಣೆಗಾಗಿ ಕಟ್ಟಾ ಹಿಂದೂ ನಾಯಕನನ್ನು ಸರ್ಕಾರದ ಮುಖ್ಯಸ್ಥನನ್ನಾಗಿ ಆಯ್ಕೆ ಮಾಡುವಂತೆ ಜನರಲ್ಲಿ ಕೇಳಿಕೊಂಡಿದ್ದರು.


Provided by

ಕಾಂಗ್ರೆಸ್ ನಾಯಕ ಪ್ರಮೋದ್ ದುಬೆ ನೀಡಿರುವ ದೂರಿನ ಆಧಾರದ ಮೇಲೆ ಕಾಳಿಚರಣ್ ವಿರುದ್ಧ ಭಾನುವಾರ ರಾತ್ರಿ ತಿಕ್ರಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು

ಚಂಡೀಗಢ: ನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಜಯ

ಕೋಮು ಪ್ರಚೋದನಕಾರಿ ಭಾಷಣ ಆರೋಪ: ಹಾರಿಕಾ ಮಂಜುನಾಥ ವಿರುದ್ಧ ಎಫ್​ಐಆರ್​ ದಾಖಲು

ತೆಲಂಗಾಣ: ಗುಂಡಿನ ಚಕಮಕಿ; ಆರು ಮಂದಿ ನಕ್ಸಲರ ಹತ್ಯೆ

 

ಇತ್ತೀಚಿನ ಸುದ್ದಿ