ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು - Mahanayaka
8:29 PM Wednesday 5 - February 2025

ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು

fir
24/03/2022

ಬೆಂಗಳೂರು: ರಾಜ್ಯ ಬೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಬಿಎಂಪಿ ಆಡಳಿತ ವಿಭಾಗದ ಅಧಿಕಾರಿ ಯೋಗೇಶ್‌ ಆರೋಪಿಯಾಗಿದ್ದು, ಮಹಾಲಕ್ಷ್ಮೀ ಲೇಔಟ್‌ನ ನಿವಾಸಿ ಬೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ನೀಡಿರುವ ದೂರಿನ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿ ಯೋಗೇಶ್‌ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಮೈ- ಕೈ ಮುಟ್ಟಿ ಅತ್ಯಾಚಾರ ಮಾಡುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ದೂರಿನಲ್ಲಿ ಸಂತ್ರಸ್ತೆ ಒತ್ತಾಯಿಸಿದ್ದಾರೆ.

ಮತ್ತೂಂದೆಡೆ ಈ ಆರೋಪವನ್ನು ತಳ್ಳಿ ಹಾಕಿರುವ ಯೋಗೇಶ್‌, ಸರ್ಕಾರದಿಂದ ಈಗಾಗಲೇ ಬೋವಿ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕ ಪ್ರಭಾರಿ ಆಗಿ ತಮ್ಮನ್ನು ನಿಯೋಜಿಸಿ 2 ತಿಂಗಳಾಗಿದೆ. ಆದರೆ, ಸರ್ಕಾರದ ಆದೇಶ ಸ್ವೀಕರಿಸಿ ಆ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ ನಿಷೇಧ ಪ್ರಕರಣ: ತುರ್ತು ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರ

ಬೈಕ್‌ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಆರೋಪಿಯನ್ನು ಬಂಧಿಸಲು ತೆರಳಿದ್ದ ಎಸ್‍ಐಗೆ ಚೂರಿ ಇರಿತ

ಇತ್ತೀಚಿನ ಸುದ್ದಿ