ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ
ನೆಲ್ಲೂರು: ವಿದೇಶಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದ್ದು, ಇಂದು ಜಗತ್ತಿನಾದ್ಯಂತ ಮಹಿಳಾ ದಿನಾಚರಣೆ ನಡೆಯುತ್ತಿರುವುದರ ನಡುವೆಯೇ ಇಂತಹದ್ದೊಂದು ಮಹಿಳಾ ದೌರ್ಜನ್ಯ ಘಟನೆ ವರದಿಯಾಗಿದೆ.
ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡಿದ ವೇಳೆ ಸೈದಾಪುರದ ರಾವೂರ್ ರಸ್ತೆಯಲ್ಲಿ ಕೆಲವು ಅಪರಿಚಿತ ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಸಂತ್ರಸ್ತ ಮಹಿಳೆ ಸೈದಾಪುರಂ ಪೊಲೀಸರಿಗೆ ದೂರು ನೀಡಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೆ ಬಲೆ ಬೀಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು?
4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಜೇಮ್ಸ್!
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಸಚಿವ ಆನಂದ್ ಸಿಂಗ್, ಜನಾರ್ದನ ರೆಡ್ಡಿಗೆ ಜಾಮೀನು
ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ