ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ - Mahanayaka

ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

arrest
04/09/2021

ಬೆಂಗಳೂರು: ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಕೂಡ ನೈಜೀರಿಯಾ ಪ್ರಜೆಗಳು ಎಂದು ತಿಳಿದು ಬಂದಿದೆ.

35 ವರ್ಷ ವಯಸ್ಸಿನ ಟೋನಿ ಹಾಗೂ 36 ವರ್ಷ ವಯಸ್ಸಿನ ಉಬಾಕಾ ಬಂಧಿತ ಆರೋಪಿಗಳಾಗಿದ್ದು, ನಗರದ ಪ್ರತಿಷ್ಠಿತ ಕಂಪೆನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಸಂತ್ರಸ್ತ ಯುವತಿಗೆ ಆರೋಪಿ ಟೋನಿ ಹಲವು ವರ್ಷಗಳಿಂದ ಪರಿಚಿತನಾಗಿದ್ದ ಎಂದು ಹೇಳಲಾಗಿದೆ.

ಟೋನಿಯು ಸಂತ್ರಸ್ತ ಯುವತಿಯನ್ನು ಮತ್ತೋರ್ವ ಆರೋಪಿ ಉಬಾಕಗೆ ಪರಿಚಯಿಸಲು ಯತ್ನಿಸಿದ್ದು, ಆ.29ರಂದು ಸ್ನೇಹಿತರ ಮನೆಗೆಂದು ಟೋನಿ ಯುವತಿಯನ್ನು ಕರೆದಿದ್ದಾನೆ. ಬಳಿಕ ಮೂವರು ಜೊತೆಯಾಗಿ ಮದ್ಯ ಸೇವಿಸಿದ್ದಾರೆ. ಮದ್ಯ ಕುಡಿದ ಮತ್ತಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಯುವತಿ ಬಾಣಸವಾಡಿ ಠಾಣೆಗೆ ದೂರು ನೀಡಿದ್ದರು.

ಯುವತಿಯ ದೂರು ಆಧರಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವತಿಯ ಮೊಬೈಲ್ ನಲ್ಲಿ ಹಲವು ಆಫ್ರಿಕನ್ ಪ್ರಜೆಗಳ ನಂಬರ್ ಗಳು ಪತ್ತೆಯಾಗಿವೆ ಎಂದು ಹೇಳಲಾಗಿದ್ದು, ಯುವತಿ ಆಫ್ರಿಕನ್ ಪ್ರಜೆಗಳ ಜೊತೆಗೆ ಯಾಕಾಗಿ ಸಂಪರ್ಕ ಹೊಂದಿದ್ದಾಳೆ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು….

1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್

ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ

ಸಾ.ರಾ.ಮಹೇಶ್ ಒಡೆತನದ ಜಾಗಗಳ ಮರು ಸರ್ವೇಗೆ ಆದೇಶ: ರೋಹಿಣಿ ಸಿಂಧೂರಿ ಆರೋಪಗಳಿಗೆ ಮರುಜೀವ

ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರ ನನಗಿಲ್ಲ, 2023ರ ಚುನಾವಣೆಗಾಗಿ ಕಾಯುತ್ತಿದ್ದೇನೆ | ಬಿ.ವೈ.ವಿಜಯೇಂದ್ರ

“ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ” | ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದ ಸಚಿವ ಈಶ್ವರಪ್ಪ!

ಇತ್ತೀಚಿನ ಸುದ್ದಿ