ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ನಡೆಸಿ ಹತ್ಯೆ!
ಭಟ್ಕಳ: ಮಹಿಳೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಗುಳ್ಮಿ ಸಮೀಪದ ತಲಾಂದ್ ಗುಡ್ಡದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮಹಿಳೆಯೊಬ್ಬರು ಈ ಸ್ಥಳದಿಂದ ಹಾದು ಹೋಗುತ್ತಿದ್ದ ವೇಳೆ ದುರ್ವಾಸನೆ ಬರುತ್ತಿದ್ದು, ಕೂಡಲೇ ಅವರು ಸಮೀಪದ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರಬಹುದು ಎಂಬುದು ಸ್ಪಷ್ಟವಾಗಿದೆ. ಇದು ಒಬ್ಬ ವ್ಯಕ್ತಿಯ ಕೃತ್ಯವಾಗಿರದೆ ಸಾಮೂಹಿಕ ಅತ್ಯಾಚಾರ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಹಿಳೆಗೆ 30ರಿಂದ 40 ವರ್ಷ ವಯಸ್ಸಾಗಿರಬಹುದು ಎಂದು ಹೇಳಲಾಗಿದೆ.
ಇನ್ನೂ ಶನಿವಾರ ಸಂಜೆ ವ್ಯಕ್ತಿಯೊಬ್ಬನ ಜೊತೆ ಮಹಿಳೆಯೊಬ್ಬರು ಬೈಕ್ ನಲ್ಲಿ ತಲಾಂದ್ ಗುಡ್ಡಕ್ಕೆ ತೆರಳಿರುವುದನ್ನು ಗುಳ್ಮಿ ಪ್ರದೇಶದ ಜನರು ನೋಡಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಬೆಳ್ಳಿಯಪ್ಪ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಲೂನ್ ಸ್ಪಾದಲ್ಲಿ ವೇಶ್ಯಾವಾಟಿಕೆ: ಮೂವರು ಅಮಾಯಕ ಮಹಿಳೆಯರ ರಕ್ಷಣೆ
ಹಿಂದೂಗಳ ಮೇಲೆ, ರಾಮನ ಮೇಲೆ ನಿಮಗೇಕಿಷ್ಟು ಕೋಪ?: ಕಾಂಗ್ರೆಸ್ ಗೆ ಹಾರ್ದಿಕ್ ಪಟೇಲ್ ಪ್ರಶ್ನೆ
ಅಂಬೇಡ್ಕರ್ ಹೆಸರಿಗೆ ವಿರೋಧ: ಶಾಸಕರ, ಸಚಿವರ ಮನೆಗೆ ಬೆಂಕಿ ಹಚ್ಚಿದ ದೇಶದ್ರೋಹಿಗಳು