ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಕ್ಕೆ ರಾಡ್ ನುಗ್ಗಿಸಿದ ದುಷ್ಟರು: ಮಹಿಳೆಯ ಸ್ಥಿತಿ ಚಿಂತಾಜನಕ - Mahanayaka
1:22 PM Thursday 12 - December 2024

ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಕ್ಕೆ ರಾಡ್ ನುಗ್ಗಿಸಿದ ದುಷ್ಟರು: ಮಹಿಳೆಯ ಸ್ಥಿತಿ ಚಿಂತಾಜನಕ

mumbai
10/09/2021

ಮುಂಬೈ: ದೇಶದಲ್ಲಿ ಮತ್ತೊಂದು ಅಮಾನವೀಯ, ಅನಾಗರಿಕ ಕೃತ್ಯ ನಡೆದಿದ್ದು, ಮಹಿಳೆಯೊಬ್ಬರನ್ನು ಅತ್ಯಾಚಾರ ನಡೆಸಿ ಖಾಸಗಿ ಭಾಗಕ್ಕೆ ರಾಡ್ ನುಗ್ಗಿಸಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಸಾಕಿ ನೌಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,  32 ವರ್ಷ ವಯಸ್ಸಿನ ಮಹಿಳೆಯ ಮೇಲೆ ಈ ಅನಾಗರಿಕ ದೌರ್ಜನ್ಯ ನಡೆದಿದೆ. ಮಹಿಳೆಯನ್ನು ಅತ್ಯಾಚಾರ ನಡೆಸಿದ ಬಳಿಕ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ನುಗ್ಗಿಸಿ ಅಮಾನವೀಯತೆ ಮೆರೆಯಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮುಂಜಾನೆ 3:30ರ ವೇಳೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ಕರೆ ಮಾಡಿ, ಖೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರು ಪ್ರಜ್ಞಾಹೀನಾ ಸ್ಥಿತಿಯಲ್ಲಿ ಬಿದ್ದಿದ್ದು, ಅವರಿಗೆ ತೀವ್ರ ರಕ್ತ ಸ್ರಾವವಾಗಿದೆ ಎಂದು ಮಾಹಿತಿ ನೀಡಿದ್ದರು.

ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಮಹಿಳೆಯನ್ನು ತಕ್ಷಣವೇ ಘಾಟ್ಕೋಪರ್ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸರು ಶಂಕೆಯ ಮೇರೆಗೆ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನೆಯ ಬಗ್ಗೆ ಅತ್ಯಾಚಾರ ಹಾಗೂ ಹತ್ಯೆಗೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ನಾನು ಕಾಶ್ಮೀರ್ ಪಂಡಿತ್, ನನ್ನ ಕುಟುಂಬ ಕಾಶ್ಮೀರ್ ಪಂಡಿತ್ | ರಾಹುಲ್ ಗಾಂಧಿ

ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ?

ಮೊದಲು ಕಾಂಗ್ರೆಸ್ ನ್ನು ತೊಡೆದು ಹಾಕಬೇಕು | ನಟ ಅಹಿಂಸಾ ಚೇತನ್

ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್

ಪೆಟ್ರೋಲ್ ತುಂಬುತ್ತಿದ್ದ ವೇಳೆ ಕಾರಿಗೆ ಬೆಂಕಿ: ಬಾಲಕಿ ಸಹಿತ 9 ಮಹಿಳೆಯರು ಸುಟ್ಟು ಕರಕಲು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು, ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ: ವ್ಯಾಪಕ ಆಕ್ರೋಶ

ಸಾಬಿಯಾ ಸೈಫಿ ಅತ್ಯಾಚಾರ, ಬರ್ಬರ ಹತ್ಯೆ ವಿರುದ್ಧ ಎಸ್ ಡಿಪಿಐ ಬೃಹತ್ ಹಕ್ಕೊತ್ತಾಯ

ಇತ್ತೀಚಿನ ಸುದ್ದಿ