ಮಹಿಳೆಯ ಮೇಲೆ ದಾಳಿ ನಡೆಸಿದ ಚಿರತೆ!
ಮಂಡ್ಯ: ಮಹಿಳೆಯೊಬ್ಬರ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಮಹಿಳೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಓಡಿದ್ದಾರೆ.
ಮಂಡ್ಯ ತಾಲೂಕಿನ ಅವ್ವೆರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮಣ್ಣಿ ಎಂಬ ಮಹಿಳೆ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸಿದ ವೇಳೆ ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದು, ಈ ವೇಳೆ ಚಿರತೆ ಗುಂಡಿಯೊಳಗೆ ಬಿದ್ದಿದೆ ಎನ್ನಲಾಗಿದೆ.
ಮಹಿಳೆಯ ಕಿರುಚಾಟ ಕೇಳಿ ಅಕ್ಕ ಪಕ್ಕದ ಜನರು ಬರುವಷ್ಟರಲ್ಲಿ ಚಿರತೆ ಗುಂಡಿಯಿಂದ ಎದ್ದು ಪರಾರಿಯಾಗಿದೆ. ಈವರೆಗೆ ಮೂಕ ಪ್ರಾಣಿಗಳ ಮೇಲೆ ಚಿರತೆ ನಿರಂತರವಾಗಿ ದಾಳಿ ನಡೆಸುತ್ತಿತ್ತು. ಇದೀಗ ಮನುಷ್ಯರ ಮೇಲೆ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಚಿರತೆಯ ಭೀತಿಯಿಂದ ಇಲ್ಲಿನ ಜನರು ಮನೆಯಿಂದ ಹೊರ ಬರಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕತ್ತಲಿನ ವೇಳೆ ಮನೆಯಿಂದ ಯಾರೂ ಹೊರ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw