ಕಾಲುಂಗುರ, ಕಾಲ್ಗೆಜ್ಜೆ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು!
ಜೈಪುರ: ಬೆಳ್ಳಿಯ ಕಾಲುಂಗುರ ಹಾಗೂ ಕಾಲ್ಗೆಜ್ಜೆ ದರೋಡೆ ಮಾಡಲು ಮಹಿಳೆಯೊಬ್ಬರ ಪಾದವನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯಲ್ಲಿ ನಡೆದಿದೆ.
ರಾಜ್ ಸಮಂದ್ ಜಿಲ್ಲೆಯ ಹೊಲವೊಂದರಲ್ಲಿ ಕೊಚ್ಚಿ ಹಾಕಿದ ಪಾದ ಹೊಂದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಕಾಲು ಗೆಜ್ಜೆ, ಕಾಲುಂಗುರ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ದರೋಡೆಕೋರರು ಮಹಿಳೆಯ ಕುತ್ತಿಗೆಯ ಮೇಲೆ ಬಲವಾದ ಹಲ್ಲೆ ನಡೆಸಿದ್ದರಿಂದಾಗಿ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಬಾರಿ ಜೈಪುರ ಜಿಲ್ಲೆಯ ಖತೇಪುರ ಗ್ರಾಮದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಇದೀಗ ಕಂಕುಬಾಯಿ ಎಂಬ ಮಹಿಳೆಯನ್ನು ಕೂಡ ನಿರ್ದಯವಾಗಿ ಹತ್ಯೆ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾರಮ್ಮ, ಮಹಾಕಾಳಿಯೂ ಮಾಂಸಾಹಾರಿಗಳಲ್ಲವೇ? | ಹಂಸಲೇಖರನ್ನು ವಿಲನ್ ಮಾಡಿದ ಮಾಧ್ಯಮಗಳು
ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ!
ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ | ಫ್ಲ್ಯಾಟ್ ನಿಂದ ಹೊರಗೆ ಓಡಿ ಬಂದ ನಿವಾಸಿಗಳು
ಬೈಕ್—ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು
ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ!
ಶಾಕಿಂಗ್ ನ್ಯೂಸ್: 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ವ್ಯಕ್ತಿ ಕೊರೊನಾಕ್ಕೆ ಬಲಿ