ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ದರೋಡೆ: ಮುಸುಕುಧಾರಿಗಳಿಂದ ಕೃತ್ಯ
ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಓರ್ವ ಮುಸುಕು ಹಾಕಿದ್ರೆ ಇನ್ನೋರ್ವ ವ್ಯಕ್ತಿ ಮಾಸ್ಕ್ ಹಾಕಿದ್ದ ವ್ಯಕ್ತಿಗಳು ದರೋಡೆ ಮಾಡಿದ್ದಾರೆ ಎಂದು ದೂರಲಾಗಿದೆ. ಮನೆಯೊಳಗೆ ನುಗ್ಗಿ ನಗದು ಹಣ ಹಾಗೂ ಅಡಿಕೆ ದರೋಡೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw