ಯೋಗಿ ಆದಿತ್ಯನಾಥ್ ಅವರಿಂದ ಮಹಿಳೆಯರಿಗೆ ರಕ್ಷಾ ಬಂಧನದ ಕೊಡುಗೆ: ಉಚಿತ ಬಸ್ ಪ್ರಯಾಣ
ಲಕ್ನೋ: ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ.
ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ.
ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವ ವನ್ನು ಗುರುತಿಸುವ ಉದ್ದೇಶದಿಂದ ಈ ಘೋಷಣೆ ಬಂದಿದೆ ಎನ್ನಲಾಗಿದೆ. ಇದರ ಹಿನ್ನೆಲೆಯಲ್ಲಿ 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka