ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ | ಕಾರ್ಯಾಚರಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗೂ ಗಂಭೀರ ಗಾಯ
ಪಾಲಕ್ಕಾಡ್: ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ಪಾಲಕ್ಕಾಡ್ ನ ತಿರುಚವಿಳಕುನ್ನು ಎಂಬಲ್ಲಿ ಸಂಜೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಾಯೋಗಿಕವಾಗಿ ಘಟಕವು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ತೈಲ ಸೋರಿಕೆಯಾಗಿದೆ ಎಂದು ಮಾಹಿತಿ ಲಭಿಸಿದೆ.
ಇನ್ನೂ ಘಟನಾ ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವ ನಡುವೆ ತೈಲ ಟ್ಯಾಂಕ್ ಮತ್ತೊಮ್ಮೆ ಸ್ಫೋಟಗೊಂಡಿದೆ. ಇದರಿಂದಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
ಹಿಂದುತ್ವದ ಪರವಾಗಿ ಸರ್ಕಾರ ಇರಬೇಕು | ತೀವ್ರ ಮುಖಭಂಗದ ಬಳಿಕ ಯತ್ನಾಳ್ ಹೇಳಿಕೆ
ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಕಾರಿನಲ್ಲೇ ಅತ್ಯಾಚಾರ | ಬಾಡಿಗೆ ಮನೆ ಮಾಲಿಕನಿಂದ ಕೃತ್ಯ
“BSP ಗೆದ್ದು ಬಂದ ನೆಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತದೆ” | ಬಿಎಸ್ ಪಿಯಿಂದ ಅಚ್ಚರಿಯ ಹೇಳಿಕೆ
ಮಗುಚಿ ಬಿದ್ದ ಆಟೋ ರಿಕ್ಷಾ: ವೃದ್ಧ ಸ್ಥಳದಲ್ಲಿಯೇ ಸಾವು, ಇಬ್ಬರ ಸ್ಥಿತಿ ಗಂಭೀರ