ಮಕ್ಕಳನ್ನು ಹೆದರಿಸಲು ಗುಂಡು ಹಾರಿಸಿದ ಸಚಿವರ ಪುತ್ರನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
ಪಾಟ್ನಾ: ತೋಟವೊಂದರಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪ ಹಿನ್ನೆಲೆ, ಬಿಹಾರದ ಸಚಿವರೊಬ್ಬರ ಪುತ್ರನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.
ಬಿಜೆಪಿ ನಾಯಕ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವರಾಗಿರುವ ನಾರಾಯಣ್ ಶಾ ಅವರ ಮಗ ಬಬ್ಲು ಕುಮಾರ್ ಗ್ರಾಮಸ್ಥರಿಂದ ಹಲ್ಲೆಗೊಳಗಾದ ವ್ಯಕ್ತಿ. ಇವರು ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಎದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಮಕ್ಕಳು ಗಾಬರಿಯಿಂದ ಓಡಿ ಹೋಗಿದ್ದಾರೆ. ಪರಿಣಾಮ ಕಾಲ್ತುಳಿತದಿಂದಾಗಿ ಒಂದು ಮಗು ಸೇರಿದಂತೆ 6 ಮಕ್ಕಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಸರ್ಕಾರಿ ವಾಹನದಲ್ಲಿ ಬಂದ ಸಚಿವರ ಮಗನನ್ನು ಗ್ರಾಮಸ್ಥರು ಅಟ್ಟಿಸಿಕೊಂಡು ಹೋಗಿದ್ದಾರೆ. ಜೊತೆಗೆ ಸಚಿವರ ಹೆಸರಿನ ನಾಮಫಲಕವನ್ನೂ ಸಹ ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಇದನ್ನು ಕಂಡ ಸಚಿವರ ಮಗ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.
ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ನಾರಾಯಣ್ ಶಾ, ತಮ್ಮ ಮಗನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆರೋಪಗಳು ಆಧಾರ ರಹಿತವಾಗಿದ್ದು, ನನ್ನ ಮಾನಹಾನಿ ಮಾಡುವ ರಾಜಕೀಯ ಷಡ್ಯಂತ್ರ ಇದಾಗಿದೆ ಎಂದಿದ್ದಾರೆ.
ಹಲ್ಲೆಗೊಳಗಾದ ಸಚಿವರ ಮಗ ಅವರ ಸಹಚರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಹಾರಿಸಿದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ವರ್ಮಾ ಪಿಟಿಐಗೆ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೋರ್ವ ಬಿಜೆಪಿ ಶಾಸಕ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಗುರಿ ತಪ್ಪಿದ ಗುಂಡು: 8 ವರ್ಷದ ಬಾಲಕಿ ಬಲಿ
ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ