ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ | ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
ಚಿಕ್ಕಬಳ್ಳಾಪುರ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಕೆಲವು ಸ್ವಾಮೀಜಿಗಳು ಹೋರಾಟ ಆರಂಭಿಸಿರುವ ಬಗ್ಗೆ ಇಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದು, ಸರ್ಕಾರ ಯಾವುದನ್ನೂ ಯಾರ ಮೇಲೂ ಬಲವಂತವಾಗಿ ಹೇರುವುದಿಲ್ಲ ಎಂದು ಹೇಳಿದ್ದಾರೆ
ಮೊಟ್ಟೆ ಸಮಗ್ರ ಪೌಷ್ಠಿಕ ಆಹಾರ ಎಂದು ಸಂಶೋಧನೆಗಳು ಹೇಳಿವೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ. ಆಹಾರ ಪದ್ಧತಿ ಅವರವರ ಇಷ್ಟ. ಕೆಲವರು ಮೊಸರು ತೆಗೆದುಕೊಳ್ಳುವುದಿಲ್ಲ. ಇನ್ನು ಕೆಲವರು ಮೊಟ್ಟೆ ಮಾತ್ರ ತಿನ್ನುತ್ತಾರೆ. ಅವರವರ ಆಹಾರ ಪದ್ಧತಿ ಅವರ ಇಷ್ಟ. ಹಾಗಾಗಿ ಯಾವುದೇ ಆಹಾರವನ್ನು ಬಲವಂತವಾಗಿ ಹೇರುವುದಿಲ್ಲ ಎಂದು ಸುಧಾಕರ್ ತಿಳಿಸಿದರು.
ಶಿಕ್ಷಣ ಇಲಾಖೆಯು, ಅಪೌಷ್ಠಿಕತೆ ಮತ್ತು ರಕ್ತಹೀನತೆ ಹೊಂದಿರುವ ಬಡ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 7 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡಲು ನಿರ್ಧರಿಸಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು ವಿತರಣೆ ಮಾಡಲಾಗುತ್ತಿದೆ.
ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಬೆಳವಣಿಗೆ ಸಹಕಾರಿಯಾಗಲು ಸರ್ಕಾರ ಉತ್ತಮ ಕ್ರಮವನ್ನು ಕೈಗೊಂಡಿದೆ. ಆದರೆ, ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಸ್ವಾಮೀಜಿಗಳು ಅನ್ನಿಸಿಕೊಂಡವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ರಾಜ್ಯದ 7 ಜಿಲ್ಲೆಗಳ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾಗ ಮಾತನಾಡದ ಇವರು, ಸರ್ಕಾರ ಇದೀಗ ಮಕ್ಕಳ ಬೆಳವಣಿಗೆಗಾಗಿ ಕ್ರಮಕೈಗೊಂಡಾಗ ದುರುದ್ದೇಶಿದಿಂದ ಬಡ ಮಕ್ಕಳ ಹೊಟ್ಟೆಗೆ ಹೊಡೆಯಲು ಮುಂದಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ.
ಮೊಟ್ಟೆ ನೀಡಬಾರದು ಎಂಬ ರಾಜಕೀಯಕ್ಕೆ ಬಡ ಮಕ್ಕಳು ತಮ್ಮ ಆಹಾರದಿಂದ ವಂಚನೆಕೊಳಗಾಗುವಂತಾಗಿದೆ. ಹಸಿವಿನ ಅನುಭವವಿಲ್ಲದವರು ಮಾತ್ರವೇ ಮಕ್ಕಳಿಗೆ ನೀಡುವ ಆಹಾರದ ವಿರುದ್ಧ ಮಾತನಾಡಲು ಸಾಧ್ಯ ನಿಮ್ಮ ರಾಜಕೀಯಕ್ಕೆ ಮಕ್ಕಳನ್ನು ಬಲಿಕೊಡಬೇಡಿ ಎಂಬ ಮಾತುಗಳು ಸದ್ಯ ಸಾರ್ವಜನಿಕರಿಂದ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪೊದೆಗೆ ಎಸೆದು ಹೋಗಿದ್ದ ಪೋಷಕರ ಬಂಧನ
ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ | ಹೆಚ್.ಡಿ.ಕುಮಾರಸ್ವಾಮಿ
ಬೊಮ್ಮಾಯಿಯನ್ನು ಕಿತ್ತು ಹಾಕಲು ಈಶ್ವರಪ್ಪ ಓಡಾಡುತ್ತಿದ್ದಾರೆ | ಸಿದ್ದರಾಮಯ್ಯ
ತಮಿಳು ಗೊತ್ತಿದ್ದವರಿಗೆ ಮಾತ್ರ ಸರ್ಕಾರಿ ನೌಕರಿ | ತಮಿಳುನಾಡು ಸರ್ಕಾರದಿಂದ ಮಹತ್ವದ ನಿರ್ಧಾರ
ಹಿರಿಯ ನಟ ಶಿವರಾಮ್ ಪಂಚಭೂತಗಳಲ್ಲಿ ಲೀನ: ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
ನಂಬರ್ ಪ್ಲೇಟ್ ನಲ್ಲಿ SEX ಪದ ಬಳಕೆ: ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟಿಸ್