ಮಕ್ಕಳ ಕಲ್ಯಾಣ ಸಮಿತಿಯಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ - Mahanayaka

ಮಕ್ಕಳ ಕಲ್ಯಾಣ ಸಮಿತಿಯಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ

03/02/2021

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶನದಂತೆ ಜಿಲ್ಲೆಗಳಲ್ಲಿ 2020-2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ 1 ಅಧ್ಯಕ್ಷರ ಹುದ್ದೆಗೆ ಹಾಗೂ 4 ಸದಸ್ಯರ ಹುದ್ದೆಗಳಿಗೆ ಮತ್ತು ಬಾಲನ್ಯಾಯ ಮಂಡಳಿಗೆ 2 ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ರಲ್ಲಿ ಲಭ್ಯವಿದ್ದು, ಅರ್ಜಿದಾರರು ಸಮಿತಿ ಅಥವಾ ಮಂಡಳಿ ಯಾವುದಾದರೊಂದಕ್ಕೆ ಮಾತ್ರ ಅರ್ಜಿ ಸಲ್ಲಿಸುವುದಾದಲ್ಲಿ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಹಾಗೂ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ದ್ವಿಪ್ರತಿಯಲ್ಲಿ ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಫೆಬ್ರವರಿ 15ರೊಳಗಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್. ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ದೂ.ಸಂ.: 080-22879382/83 ಅಥವಾ ಆಯಾ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

ಇತ್ತೀಚಿನ ಸುದ್ದಿ