ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ! - Mahanayaka

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

subji mandi
13/09/2021

ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ದೆಹಲಿಯ ಜನದಟ್ಟಣೆಯಿಂದ ಕೂಡಿರುವ ಸಬ್ಜಿ ಮಂಡಿ ಪ್ರದೇಶದಲ್ಲಿ ಸೋಮವಾರ ನಡೆದಿದ್ದು, ಅವಶೇಷಗಳಡಿಯಲ್ಲಿ  ಇನ್ನೂ 3ರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿಯ ಜೊತೆಗೆ ಇಬ್ಬರು ಮಕ್ಕಳು ಕಟ್ಟಡದ ಸಮೀಪದಲ್ಲಿ ಹಾದುಹೋಗುತ್ತಿದ್ದ ವೇಳೆಯೇ ಕಟ್ಟಡ ಕುಸಿದಿದ್ದು, ಪರಿಣಾಮವಾಗಿ ಮಕ್ಕಳ ಮೇಲೆ ಕಟ್ಟಡದ ಅವಶೇಷಗಳು ಉರುಳಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಕ್ಕಳು 7 ಮತ್ತು 12 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ.

ಇನ್ನೂ 72 ವರ್ಷ ವಯಸ್ಸಿನ ರಾಮ್ ಜಿ ದಾಸ್ ಎಂಬವರು ಕೂಡ ಅವಶೇಷಗಳಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸಲಾಗಿದೆ. ಅವರ ತಲೆಗೆ ಗಾಯವಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಸಿದು ಬಿದ್ದ ಕಟ್ಟಡದ ನೆಲಮಹಡಿಯು 75 ವರ್ಷ ಹಳೆಯದ್ದು ಎನ್ನಲಾಗಿದ್ದು, ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು. ಇನ್ನುಳಿದವುಗಳು ವಾಸಕ್ಕೆ ಬಳಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸ್ಥಳೀಯ ತಂಡ, ಎಂಸಿಡಿ, ಎನ್‌ ಡಿಆರ್‌ ಎಫ್ ಸೇರಿ ಇತರ ತಂಡಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಏಳು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್: ಹಫ್ತಾ ನೀಡಲು ನಿರಾಕರಿಸಿದ ವ್ಯಕ್ತಿಯ ಪತ್ನಿಯ ಮೇಲೆ ರೌಡಿಗಳಿಂದ ಗ್ಯಾಂಗ್ ರೇಪ್

ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದು ನಾಲ್ವರು ವಿದ್ಯಾರ್ಥಿನಿಯರಿಗೆ ಗಾಯ!

ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತಿದ್ದ ಶೋಭಾ ಕರಂದ್ಲಾಜೆ ಇಗೆಲ್ಲಿದ್ದಾರಪ್ಪಾ? | ಸಿದ್ದರಾಮಯ್ಯ ಪ್ರಶ್ನೆ

ಅಜ್ಜಿಯ ಮನೆಗೆ ಬಂದ ಮಹಿಳೆ, ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ!

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!

ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ಸಂಖ್ಯೆಯನ್ನು ಸೇರಿಸಿಕೊಳ್ಳಿ. ಮಾಧ್ಯಮದ ಬೆಳವಣಿಗೆಗೆ ನಿಮ್ಮ ಸಹಕಾರವಿರಲಿ.

ಇತ್ತೀಚಿನ ಸುದ್ದಿ