ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ: ಪೋಷಕರಲ್ಲಿ ಆತಂಕ
ಬೆಂಗಳೂರು: ಕೊರೊನಾ ಮೂರನೇ ಅಲೆಯ ನಡುವೆಯೇ ಮಕ್ಕಳಲ್ಲಿ ವೈರಲ್ ಜ್ವರ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವಿಪರೀತ ಜ್ವರ ಕಾಣಿಸಿಕೊಳ್ಳುತ್ತಿದ್ದು, ಇದೀಗ ಪೋಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರೊಯಾ, ಬೌರಿಂಗ್, ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ದಾಖಲಾಗುತ್ತಿದ್ದು, ವಿಪರೀತ ಜ್ವರ, ನ್ಯೂಮೋನಿಯಾ, ರಕ್ತಹೀನತೆ, ಅಸ್ತಮ, ಡೆಂಗ್ಯೂವಿನಿಂದ ಮಕ್ಕಳು ಬಳಲುತ್ತಿದ್ದಾರೆ ಎನ್ನಲಾಗಿದೆ. ಆಸ್ಪತ್ರೆ ಬೆಡ್ ಗಳು ಕೂಡ ಭರ್ತಿಯಾಗಿವೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಪ್ರತಿ ದಿನ 140-150 ಮಕ್ಕಳು ದಾಖಲಾಗುತ್ತಿದ್ದಾರೆ ಎಂದು ವರದಿಯಾಗಿದೆ.
ವಾಣಿ ವಿಲಾಸ ಆಸ್ಪತ್ರೆಯಲ್ಲಿ 110 ಬೆಡ್ ಗಳಲ್ಲಿ 70 ಬೆಡ್ ಗಳು ಭರ್ತಿಯಾಗಿದ್ದು, ವಿಕ್ಟೋರಿಯಾದಲ್ಲಿ 80 ಬೆಡ್ ಗಳು ಭರ್ತಿಯಾಗಿವೆ ಮಕ್ಕಳಲ್ಲಿ ಇದೇ ರೀತಿ ಜ್ವರ ಹೆಚ್ಚುತ್ತಿದ್ದಲ್ಲಿ ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ತೊಂದರೆಯಾಗುವ ಭೀತಿ ಎದುರಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಇನ್ನಷ್ಟು ಸುದ್ದಿಗಳು…
ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ!
ಸಿಲಿಕಾನ್ ಸಿಟಿ ಫ್ಲೈಓವರ್ ನಲ್ಲಿ ಆಕ್ಸಿಡೆಂಡ್ ಆದ ಜಾಗದಲ್ಲಿಯೇ ಕಾರು ನಿಲ್ಲಿಸಿ ಯುವಕ, ಯುವತಿಯರ ಡಾನ್ಸ್!
ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವನಿಗಾಗಿ ಶೋಧ ನಡೆಸುತ್ತಿರುವ ಪೊಲೀಸರು!
ಭಯಾನಕ ಘಟನೆ: ಜೋಡಿಯನ್ನು ದೆಹಲಿಯಿಂದ ಅಪಹರಿಸಿ, ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಎಸೆದ ಪಾಪಿಗಳು
ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದ ಅವಕಾಶ ನೀಡಿ | ದೇವದಾಸ್ ಕಾಪಿಕಾಡ್ ಒತ್ತಾಯ