ಬೆಚ್ಚಿಬೀಳಿಸುವ ಘಟನೆ: ಇಬ್ಬರು ಮಕ್ಕಳನ್ನು ಕಟ್ಟಿ ಹಾಕಿ ಬೆಂಕಿ ಹಚ್ಚಿ, ಆತ್ಮಹತ್ಯೆಗೆ ಶರಣಾದ ತಾಯಿ! - Mahanayaka
11:38 AM Wednesday 12 - March 2025

ಬೆಚ್ಚಿಬೀಳಿಸುವ ಘಟನೆ: ಇಬ್ಬರು ಮಕ್ಕಳನ್ನು ಕಟ್ಟಿ ಹಾಕಿ ಬೆಂಕಿ ಹಚ್ಚಿ, ಆತ್ಮಹತ್ಯೆಗೆ ಶರಣಾದ ತಾಯಿ!

kalaburgi
27/10/2021

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆಯೊಬ್ಬರು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯ ಪಂಚಶೀಲ ನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಹಾಗೂ ಓರ್ವಳು ಮಗಳು ಸಾವನ್ನಪ್ಪಿದ್ದು, 3 ವರ್ಷದ ಮಗ  ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಗಂಡ, ಅತ್ತೆ ಹಾಗೂ ಮಾವನ ಕಿರುಕುಳದಿಂದ ಬೇಸತ್ತು 26 ವರ್ಷ ವಯಸ್ಸಿನ ತಾಯಿ  ದೀಕ್ಷಾ ಇಷ್ಟೊಂದು ಕಠೋರವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಮೊದಲು ಮಕ್ಕಳಿಗೆ ಬೆಂಕಿ ಹಚ್ಚಿದ್ದು ಈ ವೇಳೆ ಮಕ್ಕಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ  ಆಟಿಕೆ ವಸ್ತುಗಳಿಗೆ ಕಟ್ಟಿ ಹಾಕಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ದೀಕ್ಷಾ ಹಾಗೂ 2 ವರ್ಷ ವಯಸ್ಸಿನ ಮಗಳು ಸಿಂಚನ ಮೃತಪಟ್ಟಿದ್ದು, 3 ವರ್ಷ ವಯಸ್ಸಿನ ಧನಂಜಯ್ ಗಂಭೀರವಾದ ಸುಟ್ಟ ಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇತ್ತೀಚಿನ ಸುದ್ದಿ