ಮಕ್ಕಳಿಗೆ ಬೇಕಿರುವುದು ಭವಿಷ್ಯ ರೂಪಿಸುವ ಶಿಕ್ಷಣ: ಎಚ್.ಡಿ.ಕುಮಾರಸ್ವಾಮಿ
ಹಾಸನ: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿಸಿ ನಾಗೇಶ್ ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕೆ ವ್ಯಕ್ತಪಡಿಸಿದ್ದಾರೆ.
ಹೊಳೆನರಸೀಪುರ ತಾಲೂಕಿನ ಟಿ. ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನು ಹಿಂದೂ ಬಂಧುಗಳಲ್ಲಿ ಮನವಿ ಮಾಡುತ್ತೇನೆ. ನಾನು ಹುಟ್ಟಿರುವುದೂ ಹಿಂದೂ ಕುಟುಂಬದಲ್ಲೇ. ನಮ್ಮ ಕುಟುಂಬ ದೈವದಲ್ಲಿ ಬಹಳ ನಂಬಿಕೆ ಇಟ್ಟು ಶ್ರದ್ಧೆಯಿಂದ ನಡೆದುಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ನಮ್ಮ ಮಕ್ಕಳಿಗೆ ಬೇಕಿರುವುದು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಶಿಕ್ಷಣ. ಮೊದಲು ಆ ಕಡೆ ಗಮನ ಕೊಡಿ ಎಂದು ಹೇಳಿದರು.
ಭಗವದ್ಗೀತೆಯನ್ನು ಕುಟುಂಬದಲ್ಲೇ ನಮ್ಮ ತಂದೆ-ತಾಯಿ, ಹಿರಿಯರು ಹೇಳಿಕೊಡುತ್ತಾರೆ. ಸರ್ಕಾರದ ಕೆಲಸ ಏನಿದ್ದರೂ ಉತ್ತಮ ಶಿಕ್ಷಣ ನೀಡಿ ಮಕ್ಕಳ ಬದುಕನ್ನು ಕಟ್ಟಿಕೊಡುವುದು. ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂತಹ ವಿಚಾರಗಳು, ಪಠ್ಯಗಳು ಶಾಲೆಗಳಲ್ಲಿ ಇರಬೇಕು ಎಂದರು.
ರಾಜ್ಯದಲ್ಲಿ ಕೇವಲ ಮತಬ್ಯಾಂಕ್‌ಗಾಗಿ ಇಂತಹ ಸೂಕ್ಷ್ಮ ವಿಚಾರಗಳು ಮುನ್ನೆಲೆಗೆ ಬರುತ್ತಿವೆ. ಒಂದು ಕಾಲದಲ್ಲಿ ವಿದ್ಯೆ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೇರಿದ್ದು ಎನ್ನುವ ವಾತಾವರಣ ಇತ್ತು. ಇಂದು ಅದೇ ವರ್ಗದ ಜನರು ಈ ರೀತಿಯ ವಾತಾವರಣ ಎಲ್ಲರ ಮೇಲೂ ಹೇರಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಮಕ್ಕಳು ತಮ್ಮ ಜ್ಞಾನ ಬೆಳೆಸಿಕೊಳ್ಳಲು, ಉತ್ತಮ ವಿದ್ಯಾಭ್ಯಾಸ ಮಾಡಲು ಸಾಕಷ್ಟು ನ್ಯೂನತೆಗಳಿವೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆಗಳಿವೆ. ಮೊದಲು ಅವುಗಳನ್ನು ಸರಿ ಮಾಡಬೇಕು. ಇದನ್ನು ಮಾಡುವುದು ಬಿಟ್ಟು ಸೂಕ್ಷ್ಮ ವಿಷಯಗಳನ್ನು ಕೆದಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಎಂದು ಭಗವದ್ಗೀತೆಯಲ್ಲಿ ಹೇಳಿದ್ದಾರಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಸಮಸ್ಯೆಗಳು ಸಾಕಷ್ಟು ಇವೆ. ರೈತರ ಕಷ್ಟಗಳು ದೊಡ್ಡ ಪ್ರಮಾಣದಲ್ಲಿ ಇವೆ. ಈ ಬಗ್ಗೆ ಸರ್ಕಾರ ಗಮನ ಹರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಸ್ಸೆಸೆಲ್ಸಿ ಆದವರಿಗೆ ಉದ್ಯೋಗವಕಾಶ
ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ
ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ