ಮಕ್ಕಳಿಲ್ಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ
ಮೈಸೂರು: ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ.
ಉಮೇಶ್ (30) ಪತ್ನಿ ಲತಾ (26) ಮೃತ ದಂಪತಿ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಉಮೇಶ್ ಹಾಗೂ ಲತಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದರು. 4 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಮಕ್ಕಳಿರಲಿಲ್ಲ. ಮದ್ಯವ್ಯಸನಿಯಾಗಿದ್ದ ಉಮೇಶ್ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ದಂಪತಿ ಯಾವುದೋ ವಿಚಾರಕ್ಕೆ ಮನನೊಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಲಾಧಿಕಾರಿಗಳ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನ
ಒಳ್ಳೆ ಜಮೀರ್ ಆಡಿದಂಗೆ ಆಡ್ತಿಯಲ್ಲೋ: ರೇಣುಕಾಚಾರ್ಯಗೆ ಚುಚ್ಚಿದ ಯಡಿಯೂರಪ್ಪ
ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಒಬ್ಬ ಅವಿವೇಕಿ; ಮನೋಹರ್
ಆಫ್‍ಲೈನ್ ತರಗತಿಗೆ ಹೋಗುವಂತೆ ಪೋಷಕರು ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ