ಐವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!
ರಾಜಸ್ಥಾನ: ಪತಿಯ ಕಿರಿಕಿರಿಯಿಂದ ಬೇಸತ್ತ ಪತ್ನಿ ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ.
ಭಾನುವಾರ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಪತಿ ಹಾಗೂ ಪತ್ನಿಯ ನಡುವೆ ದಿನವೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಿನವೂ ಜಗಳ ನಡೆಯುತ್ತಿರುವುದರಿಂದ ಬೇಸತ್ತ ಮಹಿಳೆಯು ತನ್ನ ಪತಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಐವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.
ಇನ್ನೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದರೂ, ಪೊಲೀಸರು ಈ ಬಗ್ಗೆ ಇನ್ನಷ್ಟು ತನಿಖೆಗಳನ್ನು ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ | ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
ನವಜಾತ ಶಿಶುವನ್ನು ಪೊದೆಗೆ ಎಸೆದು ಹೋಗಿದ್ದ ಪೋಷಕರ ಬಂಧನ
ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ | ಹೆಚ್.ಡಿ.ಕುಮಾರಸ್ವಾಮಿ
ಬೊಮ್ಮಾಯಿಯನ್ನು ಕಿತ್ತು ಹಾಕಲು ಈಶ್ವರಪ್ಪ ಓಡಾಡುತ್ತಿದ್ದಾರೆ | ಸಿದ್ದರಾಮಯ್ಯ
ತಮಿಳು ಗೊತ್ತಿದ್ದವರಿಗೆ ಮಾತ್ರ ಸರ್ಕಾರಿ ನೌಕರಿ | ತಮಿಳುನಾಡು ಸರ್ಕಾರದಿಂದ ಮಹತ್ವದ ನಿರ್ಧಾರ