ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು? - Mahanayaka
4:15 AM Thursday 14 - November 2024

ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?

nagesh
11/12/2021

ಮಂಡ್ಯ: ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಹೀಗಾಗಿ ಪ್ರೋಟೀನ್ ಗಾಗಿ ಮೊಟ್ಟೆ ನೀಡಲಾಗುತ್ತಿದೆ. ಆದರೆ, ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

ಶಾಲಾ ಮಕ್ಕಳಿಗೆ ಸರ್ಕಾರ ಮೊಟ್ಟೆ ವಿತರಿಸಲು ನಡೆಸಿರುವ ತೀರ್ಮಾನದ ವಿರುದ್ಧ ಕೆಲವು ಸಸ್ಯಹಾರಿಗಳು ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಮಕ್ಕಳ ಮೇಲೆ, ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಈ ಯೋಜನೆ ಜಾರಿ ಮಾಡಿದೆ ಎಂದರು.

ಪ್ರೊಟೀನ್​ ಗಾಗಿ ಮೊಟ್ಟೆ ನೀಡಲಾಗುತ್ತಿದೆ. ತಜ್ಞರು ಸಹ ಹೀಗೆ ಸಲಹೆ ನೀಡಿದ್ದಾರೆ. ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಸಚಿವ ನಾಗೇಶ್ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ: ಮತಾಂತರಕ್ಕೆ ಯತ್ನಿಸಿರುವುದು ಪತ್ತೆ

ಬುಡಕಟ್ಟು ಮಹಿಳೆಯರ ಜೊತೆ ಪ್ರಿಯಾಂಕಾ ಗಾಂಧಿ ನೃತ್ಯ: ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದ ಬಿಜೆಪಿ!

ಗೂಗಲ್ ನಲ್ಲಿ ಅತೀ ಹೆಚ್ಚು ಸರ್ಚ್ ಆಗಿರುವ ಸಿನಿಮಾಗಳ ಪಟ್ಟಿ ಬಿಡುಗಡೆ: ‘ಜೈ ಭೀಮ್’ಗೆ ಮೊದಲ ಸ್ಥಾನ

ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?

ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶಪಡಿಸಲು ಆದೇಶ

1 ಲೀಟರ್ ಕತ್ತೆಯ ಹಾಲಿಗೆ 10 ಸಾವಿರ ರೂಪಾಯಿ! | ಒಂದು ಚಮಚ ಕತ್ತೆಯ ಹಾಲಿಗೆ 100 ರೂಪಾಯಿ!

ಇತ್ತೀಚಿನ ಸುದ್ದಿ