ಮಲಗಿದ್ದಲ್ಲೇ ಯುವಕ ಅನುಮಾನಾಸ್ಪದ ಸಾವು
ಕುಂದಾಪುರ: ಮಲಗಿದ್ದಲ್ಲೇ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಕೋಣಿ ಗ್ರಾಮದ ರಘು ಪೂಜಾರಿ ಎಂಬವರ ಪುತ್ರ ಶ್ರೀನಿವಾಸ್ (31) ಮೃತ ಯುವಕ. ಶ್ರೀನಿವಾಸ್ ಎಂಬಿಎ ಪಧವೀಧರನಾಗಿದ್ದು ಕಳೆದ ಎರಡು ವರ್ಷಗಳಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರ ಅಣ್ಣ ಮಂಜುನಾಥ್ ಮನೆಗೆ ಬಂದಿದ್ದರು.
ಶ್ರೀನಿವಾಸ್ ಮಲಗಿದ್ದನ್ನು ನೋಡಿ ಎಬ್ಬಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಶ್ರೀನಿವಾಸ್ ಅವರ ದೇಹ ತಣ್ಣಗಾಗಿರುವುದನ್ನು ಗಮನಿಸಿ ತಕ್ಷಣ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಶ್ರೀನಿವಾಸ್ ಆರೋಗ್ಯ ಸಮಸ್ಯೆ ಅಥವಾ ಹೃದಯಾಘಾತದಿಂದಲೋ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಮಂಜುನಾಥ್ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಲಗಿದ್ದಲ್ಲೇ ಯುವಕ ಅನುಮಾನಾಸ್ಪದ ಸಾವು
ರಾಷ್ಟ್ರಧ್ವಜಕ್ಕೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು
ರಷ್ಯಾ-ಉಕ್ರೇನ್ ಯುದ್ದ: ತನ್ನ ಸರ್ಕಾರದ ವಿರುದ್ದವೇ ಹರಿಹಾಯ್ದ ಬಿಜೆಪಿ ಸಂಸದ ವರುಣ್ ಗಾಂಧಿ
ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನದಿಯಲ್ಲಿ ಪತ್ತೆ
ಕೆಂಪು ಕಲ್ಲಿನ ಅಟ್ಟಿ ಮಗುಚಿಬಿದ್ದು ಮಗು ಸಾವು