ಮಳಲಿ ಮಸೀದಿ ವಿವಾದ: ಯಾವುದೇ ಆದೇಶ ಮಾಡದಂತೆ ಹೈಕೋರ್ಟ್ ನಿರ್ದೇಶನ - Mahanayaka

ಮಳಲಿ ಮಸೀದಿ ವಿವಾದ: ಯಾವುದೇ ಆದೇಶ ಮಾಡದಂತೆ ಹೈಕೋರ್ಟ್ ನಿರ್ದೇಶನ

malali masjid
14/06/2022

ಮಂಗಳೂರು: ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದ್ದು, ಯಾವುದೇ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.


Provided by

ಮಂಗಳೂರಿನ ತೆಂಕಳ್ಳಿಪಡಿ ಗ್ರಾಮದ ಧನಂಜಯ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ಮಳಲಿಪೇಟೆ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ಮಾದರಿ ರಚನೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಲು ನ್ಯಾಯಾಲಯದ ವತಿಯಿಂದ ಕಮಿಷನರ್ ಒಬ್ಬರನ್ನು ನೇಮಕ ಮಾಡಬೇಕು. ಪರಿಶೀಲನೆ ನಡೆಸುವವರೆಗೆ ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ನೀಡದಂತೆ ಸಿವಿಲ್ ಕೋರ್ಟ್‌ಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಬಹುದು. ಆದರೆ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು. ಮಳಲಿಪೇಟೆ ಜುಮ್ಮಾ ಮಸೀದಿಯ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿಕೆ ಮಾಡಿತು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜಾತ್ರೆ ವೇಳೆ ಉರುಳಿ ಬಿದ್ದ ರಥ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

6 ಗಂಟೆಗಳಲ್ಲಿ 24 ಮೊಟ್ಟೆ ಇಟ್ಟ ಕೋಳಿ: ಅಚ್ಚರಿಗೀಡಾದ ಜನ

ತಂಗಿಯ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಅಣ್ಣ!

ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಯುವತಿ ಮೇಲೆ ಇಂಕ್ ದಾಳಿ

ಒಂದೆಡೆ ಪ್ರತಿಭಟನೆ ಮತ್ತೊಂದೆಡೆ ರಾಹುಲ್ ಗಾಂಧಿ ವಿಚಾರಣೆ!

ಇತ್ತೀಚಿನ ಸುದ್ದಿ