ಮಾಲಾಶ್ರೀ ಪತಿ ರಾಮು ಸಾವಿಗೆ ಕೊರೊನಾ ಕಾರಣ ಅಲ್ಲ! | ನಿಜವಾದ ಕಾರಣ ಏನು ಗೊತ್ತಾ?
ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ, ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಅವರು ಸೋಮವಾರ ರಾತ್ರಿ ನಿಧನರಾಗಿದ್ದರು. ಅವರು, ಕೊರೊನಾದಿಂದ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಆದರೆ, ಇದೀಗ ಅವರು ಬೇರೆಯೇ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ರಾಮು ಸಾವಿಗೆ ಕೊರೊನಾ ಕಾರಣವಲ್ಲ. ಅವರು ಫುಡ್ ಪಾಯ್ಸನ್ ನಿಂದ ಮೃತಪಟ್ಟಿದ್ದಾರೆ ಎಂದು ಇದೀಗ ವರದಿಯಾಗಿದೆ. ಕೊರೊನಾದಿಂದ ಅವರು ಮೃತಪಟ್ಟಿಲ್ಲ ಎನ್ನುವ ಮಾಹಿತಿಗಳು ಇದೀಗ ದೊರೆಯುತ್ತಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.
ಒಂದು ವಾರದ ಹಿಂದೆ ರಾಮು ಅವರಿಗೆ ಕೊರೊನಾ ಸೋಂಕು ತಗಲಿತ್ತು. ಈ ಹಿನ್ನೆಲೆಯಲ್ಲಿ ಅವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಅವರಿಗೆ ಫುಡ್ ಪಾಯ್ಸನ್ ಆಗಿದ್ದು, ಅವರ ಸಾವಿಗೆ ಫುಡ್ ಪಾಯ್ಸನ್ ಕಾರಣ ಎಂದು ಹೇಳಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿದ್ದ ರಾಮು ಅವರ ನಿಧನ ಚಿತ್ರ ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್ ಆಗಿತ್ತು. ರಾಮು ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಣ್ಣೀರು ಮಿಡಿದಿದೆ.