ಮಲತಂದೆಯಿಂದ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ
07/03/2021
ಮಲಪ್ಪುರಂ: ಮಲತಂದೆಯೋರ್ವ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಇದೀಗ ಬಾಲಕಿ ಗರ್ಭಿಣಿಯಾದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತಿರುರ್ ಕಲ್ಪಕಾಂಚೇರಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗಿದ್ದು, ಈ ವೇಳೆ ಬಾಲಕಿ ಗರ್ಭಿಣಿ ಎನ್ನುವುದು ತಿಳಿದು ಬಂದಿದೆ. ಬಾಲಕಿಯನ್ನು ವಿಚಾರಿಸಿದಾಗ ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿರುವುದು ತಿಳಿದು ಬಂದಿದೆ.
ಸಂತ್ರಸ್ತ ಬಾಲಕಿಯು ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಇದೇ ಮನೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.