ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಗೆ ಮತ್ತೊಂದು ಆಘಾತ
![dileep](https://www.mahanayaka.in/wp-content/uploads/2022/03/dileep.jpg)
ಕೊಚ್ಚಿ: ನಟಿಗೆ ಮೇಲೆ ಲೈಂಗಿಕ ದೌರ್ಜನ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಲಯಾಳಂ ಸ್ಟಾರ್ ನಟ ದಿಲೀಪ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕೇರಳ ಹೈಕೋರ್ಟ್ ನಲ್ಲಿ ದಿಲೀಪ್ ಗೆ ಹಿನ್ನಡೆಯಾಗಿದೆ.
2017 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ವಿರುದ್ಧ ತನಿಖೆ ಮುಂದುವರಿದಿದೆ. 2017 ರ ನವಂಬರ್ ನಲ್ಲಿ ಅಂತಿಮ ವರದಿ ಸಲ್ಲಿಸಿ, 2020 ರಲ್ಲಿ ಆರೋಪ ಪಟ್ಟಿ ಹೊರಿಸಲಾಗಿತ್ತು. ಪ್ರಸ್ತುತ ದಿಲೀಪ್ ರನ್ನು ಮಾತ್ರ ತನಿಖೆಗೊಳಪಡಿಸಲು ಬಾಕಿಯಿದೆ. ಹೀಗಾಗಿ ಅವರ ವಿರುದ್ಧ ಮುಂದಿನ ತನಿಖೆ ನಡೆಸಲು ಅವಕಾಶ ಕೊಡಬಾರದು ಎಂದು ದಿಲೀಪ್ ಪರ ವಕೀಲರು ಕೇರಳ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.
ವಿಚಾರಣೆಯು ಕೊನೆಯ ಹಂತದಲ್ಲಿದೆ. ಈಗ ತನಿಖೆಗೆ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಮಲಯಾಳಂ ಚಿತ್ರಗಳಲ್ಲಿ ಮಿಂಚುತ್ತಿದ್ದ ನಟ ದಿಲೀಪ್ ಮೇಲೆ ನಟಿಯ ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಅವರಿಗಿದ್ದ ವರ್ಚಸ್ಸು ಕಳೆದು ಹೋಗಿತ್ತು. ನಟಿಯ ಮೇಲಿನ ದ್ವೇಷಕ್ಕೆ ದಿಲೀಪ್ ಈ ರೀತಿಯ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣದಲ್ಲಿ ಸಿಲುಕಿರುವ ದಿಲೀಪ್ ದಿನ ನಿತ್ಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಸಚಿವ ಆನಂದ್ ಸಿಂಗ್, ಜನಾರ್ದನ ರೆಡ್ಡಿಗೆ ಜಾಮೀನು
ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ
ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ
ಮಹಿಳೆಯರ ಹಕ್ಕುಗಳ ರಕ್ಷಕ: ಬಾಬಾಸಾಹೇಬ್ ಡಾ.ಅಂಬೇಡ್ಕರ್