ಕೃತಜ್ಞತೆ: ಆರ್ಥಿಕ ಬೆಂಬಲಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಿದ ಮಾಲ್ಡೀವ್ಸ್ ಅಧ್ಯಕ್ಷ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ದ್ವೀಪ ರಾಷ್ಟ್ರವು ತನ್ನ ಸಾಲ ಮರುಪಾವತಿಯನ್ನು ಸರಾಗಗೊಳಿಸುವಲ್ಲಿ ನೀಡಿದ ಬೆಂಬಲಕ್ಕಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ನಾವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುತ್ತವೆ ಎಂಬ ಭರವಸೆಯನ್ನು ಪುನರುಚ್ಚರಿಸಿದ್ದಾರೆ.
ಮಾಲ್ಡೀವ್ಸ್ ನಲ್ಲಿ ನಡೆದ ಅಧಿಕೃತ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಯಿಝು ಮಾತನಾಡುತ್ತಿದ್ದರು. ತಮ್ಮ ಭಾಷಣದಲ್ಲಿ ಅವರು ಭಾರತದ ಆಡಳಿತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದರು. ಎಂಟು ತಿಂಗಳ ‘ರಾಜತಾಂತ್ರಿಕ ಯಶಸ್ಸನ್ನು’ ಆಚರಿಸಿದರು ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ತಿಳಿಸಿದೆ.
ಮಾಲ್ಡೀವ್ಸ್ ನ ಸಾಲ ಮರುಪಾವತಿಯನ್ನು ಸರಾಗಗೊಳಿಸುವಲ್ಲಿ ಭಾರತ ಮತ್ತು ಚೀನಾ ನೀಡಿದ ಬೆಂಬಲಕ್ಕಾಗಿ ಅಧ್ಯಕ್ಷ ಮುಯಿಝು ಕೃತಜ್ಞತೆ ಸಲ್ಲಿಸಿದರು. ಈ ಮೂಲಕ ದೇಶವು ಆರ್ಥಿಕ ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು.
ಯುಎಸ್ ಡಾಲರ್ ಗಳ ಸ್ಥಳೀಯ ಕೊರತೆಯನ್ನು ನಿವಾರಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಮಾಲ್ಡೀವ್ಸ್ ಸರ್ಕಾರವು ನವದೆಹಲಿ ಮತ್ತು ಬೀಜಿಂಗ್ ಎರಡರೊಂದಿಗೂ ಕರೆನ್ಸಿ ವಿನಿಮಯ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು.
ಮಾಲ್ಡೀವ್ಸ್ ಅಧ್ಯಕ್ಷರು ತಮ್ಮ ಆಡಳಿತವು ಯುನೈಟೆಡ್ ಕಿಂಗ್ಡಮ್‌ನೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಇದೇ ವೇಳೆ ಅವರು ಘೋಷಿಸಿದರು ಮತ್ತು ಭಾರತದೊಂದಿಗೆ ಇದೇ ರೀತಿಯ ಒಪ್ಪಂದವನ್ನು ತಲುಪುವ ಭರವಸೆಯನ್ನು ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth