ನೀರಿಗೆ ಹಾರಿದ್ದಾಗ ರಕ್ಷಿಸಲ್ಪಟ್ಟಿದ್ದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮದ ದೊಡ್ಡಮ್ಮ(60) ಮೃತ ದುರ್ದೈವಿ. ಚರಂಡಿ ಸಮೀಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುರುವಾರ ರಾತ್ರಿ ಇವರು ಕೊಳಕ್ಕೆ ಹಾರಿದ್ದ ವೇಳೆ ಪೊಲೀಸರು ರಕ್ಷಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದರು. ಅದಾದ ಬಳಿಕ, ಅಲ್ಲಿಂದ ಹೇಗೂ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ, ಮಲೆಮಹದೇಶ್ವರ ಪೊಲೀಸ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕ್ಲೀನರ್ ಸಾವು
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ಮೃತಪಟ್ಟಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ.
ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಎಂಬಾತ ಮೃತ ದುರ್ದೈವಿ. ಹನೂರು ಪಟ್ಟಣದ ಜಡೇಸ್ವಾಮಿ ಎಂಬವರಿಗೆ ಸೇರಿದ ಲಾರಿ ಮಂಡ್ಯದ ಸಕ್ಕರೆ ಕಾರ್ಖಾನೆಯಿಂದ ಸಕ್ಕರೆ ತುಂಬಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.
ಈ ವೇಳೆ ಕೇಶಿಫ್ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ಟಿಪ್ಪರ್ ನ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟಿಪ್ಪರ್ ಹಾಗೂ ಲಾರಿ ಜಖಂ ಗೊಂಡಿದ್ದು ಟಿಪ್ಪರ್ ವಾಹನದ ಎಡಬದಿಯಲ್ಲಿ ಕುಳಿತಿದ್ದ ಕ್ಲೀನರ್ ಎರಡು ವಾಹನದ ಮಧ್ಯೆ ಸಿಲುಕಿಕೊಂಡು ಅಸುನೀಗಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw