ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಗಿಫ್ಟ್ ನೀಡಿದ ಕಾಂಗ್ರೆಸ್ ಹೈಕಮಾಂಡ್! - Mahanayaka
9:44 AM Friday 20 - September 2024

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಗಿಫ್ಟ್ ನೀಡಿದ ಕಾಂಗ್ರೆಸ್ ಹೈಕಮಾಂಡ್!

12/02/2021

ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್  ರಾಜ್ಯ ಸಭೆ ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ಹೊರಿಸಿದ್ದು, ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ.

ಈ ಬಗ್ಗೆ ರಾಜ್ಯ ಸಭಾ ಸಭಾಧ್ಯಕ್ಷಕರಿಗೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಪತ್ರ ಬರೆದು ಮಾಹಿತಿ ನೀಡಲಾಗಿದೆ. ವಿಪಕ್ಷ ನಾಯಕರಾಗಿದ್ದ ಗುಲಾಂನಬೀ ಆಜಾದ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಈ ಜವಾಬ್ದಾರಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್ ಹಾಕಿದೆ.

ಮಲ್ಲಿ ಕಾರ್ಜುನ ಖರ್ಗೆ ಅವರು ಈ ಹಿಂದೆ  ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಇದೀಗ ರಾಜ್ಯಸಭೆಯಲ್ಲಿ ಅವರು ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.


Provided by

ಇತ್ತೀಚಿನ ಸುದ್ದಿ