ವಿವಾದಿತ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವರ್ಗಾವಣೆ
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ವಿವಾದಕ್ಕೀಡಾಗಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.
ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ.
ಸಿಜೆ ಅವರ ನಿರ್ದೇಶನದ ಮೇರೆಗೆ ರಾಯಚೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರ ಹಾಗೂ ಗಾಂಧೀಜಿ ಭಾವ ಚಿತ್ರವನ್ನಿಡಲಾಗಿತ್ತು. ಆದರೆ, ಅಂಬೇಡ್ಕರ್ ಚಿತ್ರವನ್ನು ತೆರವುಗೊಳಿಸಿ ಬಳಿಕ ಮಲ್ಲಿಕಾರ್ಜುನ ಗೌಡ ಧ್ವಜಾರೋಹಣ ಮಾಡಿದ್ದು, ಇದರ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಸ್ಲಿಮರ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನ ಐವರು ಪೊಲೀಸ್ ವಶಕ್ಕೆ
ಮಂಗಳೂರಿನ ಹಲವೆಡೆ ಗ್ಯಾಸ್ ವಾಸನೆ: ಆತಂಕಗೊಂಡ ಜನರು
ಕೊವಿಡ್ ನಂತರ ಆತಂಕ ಸೃಷ್ಟಿಸಿದ ಹಕ್ಕಿ ಜ್ವರ!
ಮಾಟಗಾತಿ ಎಂದು ಆರೋಪಿಸಿ ಮಹಿಳೆಯನ್ನು ಜೀವಂತವಾಗಿ ಸುಟ್ಟ ಗ್ರಾಮಸ್ಥರು!
ಹಿಜಾಬ್ ಧರಿಸುತ್ತೇವೆ, ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ | ವಿದ್ಯಾರ್ಥಿನಿಯರಿಂದ ಪಟ್ಟು