ಮಲ್ಪೆ ಬೀಚ್ ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು - Mahanayaka
10:01 AM Wednesday 10 - September 2025

ಮಲ್ಪೆ ಬೀಚ್ ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು

malpe beach
22/09/2021

ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜುತ್ತಿರುವ ವೇಳೆ ಮೂವರು ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿದ ಘಟನೆ ನಡೆದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಬೀಚ್ ನ ಲೈಫ್ ಗಾರ್ಡ್ ಗಳು ಮೂವರು ಪ್ರವಾಸಿಗರನ್ನು ಕೂಡ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.


Provided by

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯ ಕಿರಣ್‌, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಹಾಗೂ ಮಂಜುನಾಥ್ ಪ್ರಾಣಾಪಾಯದಿಂದ ಪಾರಾದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕಾಲೇಜಿನಿಂದ 35 ವಿದ್ಯಾರ್ಥಿಗಳು ಮಲ್ಪೆ ಬೀಚ್‌ ಗೆ ಪ್ರವಾಸಕ್ಕೆ ಬಂದಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುತ್ತದೆ. ಇದರ ಅರಿವಿಗೆ ಬಾರದೇ ಪ್ರವಾಸಿಗರು ನೀರಿನಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಕ್ಕಿಕೊಳ್ಳುತ್ತಿದ್ದಾರೆ. ಸಮುದ್ರದ ಬಗ್ಗೆ ಹೊರಗಿನ ಪ್ರದೇಶಗಳ ಜನರಿಗೆ ಅಷ್ಟಾಗಿ ಮಾಹಿತಿ ಇರುವುದಿಲ್ಲ. ಪ್ರಶಾಂತವಾಗಿರುವ ಸಮುದ್ರ ಯಾವಾಗಬೇಕಾದರೂ ತನ್ನ ಉಗ್ರ ರೂಪವನ್ನು ತೋರಿಸಬಹುದು. ಹೀಗಾಗಿ ಹೊರಗಿನ ಜಿಲ್ಲೆಗಳಿಂದ ಬರುವ ಪ್ರವಾಸಿಗರು ಬಹುಬೇಗನೇ ಅಪಾಯಕ್ಕೆ ತುತ್ತಾಗುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ!

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಉಂಡು ಮಲಗಿದರೂ ಮುಗಿಯಲಿಲ್ಲ ಗಂಡ ಹೆಂಡಿರ ಜಗಳ: ಪೊಲೀಸ್ ಠಾಣೆ ಎದುರು ಹಿಗ್ಗಾಮುಗ್ಗಾ ಥಳಿತ!

ರೇಣುಕಾಚಾರ್ಯ, ಕಾರಜೋಳ ಚಿರತೆ ಹಿಡಿಯುವುದರಲ್ಲಿ ಎಕ್ಸಪರ್ಟ್ ಗಳು | ಸದನದಲ್ಲಿ ಸ್ವಾರಸ್ಯಕರ ಚರ್ಚೆ

ಬೆಂಗಳೂರು: ಅಪಾರ್ಟ್​ಮೆಂಟ್ ಅಗ್ನಿ ಅವಘಡ ಪ್ರಕರಣಕ್ಕೆ ಹೊಸ ತಿರುವು: ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ!

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು

ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?

ಇತ್ತೀಚಿನ ಸುದ್ದಿ