ರಾಜ್ಯಪಾಲರ ಜತೆ ಮುನಿಸು: ವಿಶ್ವವಿದ್ಯಾಲಯಗಳಿಗೆ ಅನುದಾನವನ್ನು ನಿರ್ಬಂಧಿಸುವುದಾಗಿ ಮಮತಾ ಬ್ಯಾನರ್ಜಿ ಬೆದರಿಕೆ..? - Mahanayaka

ರಾಜ್ಯಪಾಲರ ಜತೆ ಮುನಿಸು: ವಿಶ್ವವಿದ್ಯಾಲಯಗಳಿಗೆ ಅನುದಾನವನ್ನು ನಿರ್ಬಂಧಿಸುವುದಾಗಿ ಮಮತಾ ಬ್ಯಾನರ್ಜಿ ಬೆದರಿಕೆ..?

07/09/2023

ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರ ನಿರ್ದೇಶನವನ್ನು ಒಂದು ವೇಳೆ ಪಾಲಿಸಿದರೆ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳ ವಿರುದ್ಧ ಆರ್ಥಿಕ ಅಡೆತಡೆಗಳನ್ನು ಹಾಕುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಯಾವುದೇ ಉಪಕುಲಪತಿಯನ್ನು ಹೆಸರಿಸದೆ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು 16 ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಹೊಸ ಉಪಕುಲಪತಿಗಳನ್ನು ನೇಮಕ ಮಾಡಿದ ಒಂದು ದಿನದ ನಂತರ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.

ಕೋಲ್ಕತ್ತಾದ ಧನ್ ಧನ್ಯಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ರಾಜ್ಯಪಾಲರು ಶಿಕ್ಷಣ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಸಂಚು ರೂಪಿಸುತ್ತಿದ್ದಾರೆ. ನಾವು ಈ ನಿರ್ಧಾರವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಏನು ಯೋಚಿಸುತ್ತಿದ್ದಾರೆ..? ಅವರು ಮುಖ್ಯಮಂತ್ರಿಗಿಂತ ದೊಡ್ಡವರೇ..? ಎಂದು ಪ್ರಶ್ನಿಸಿದ್ದಾರೆ.

ಹೀಗೆ ಮುಂದುವರಿದರೆ ನಾನು ಆರ್ಥಿಕ ಅಡೆತಡೆಗಳನ್ನು ಸೃಷ್ಟಿಸುತ್ತೇನೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಜ್ಯಪಾಲರು ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಯಾಗಿದ್ದರೂ ಕೂಡಾ ರಾಜ್ಯ ಸರ್ಕಾರವು ಅವರಿಗೆ ಬಜೆಟ್ ಅನ್ನು ನಿಗದಿಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

ಸಿ.ವಿ.ಆನಂದ ಬೋಸ್ ಅವರನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ನೆನಪಿಡಿ, ನೀವು ಕುಳಿತಿರುವ ರಾಜಭವನಕ್ಕೆ ನಾವು ಹಣವನ್ನು ಪಾವತಿಸುತ್ತೇವೆ” ಎಂದು ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ